ನವದೆಹಲಿ: ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸಾವಿರಾರು ವರ್ಷಗಳ ಹಿಂದೆ ಹರಿಯಾಣದ ಕುರುಕ್ಷೇತ್ರದಲ್ಲಿ ಆರು ಮಂದಿ ಸೇರಿ ಅಭಿಮನ್ಯುವನ್ನು ಹತ್ಯೆ ಮಾಡಿದರು. ಚಕ್ರವ್ಯೂಹ ಎಂದರೆ ಭಯ ಹಾಗೂ ಹಿಂಸೆ. ಅದರೊಳಗೆ ಸಿಲುಕಿಸಿ ಅಭಿಮನ್ಯುವನ್ನು ಕೊಂದು ಹಾಕಿದ್ದರು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಭಾರತವು ಇಂದು ಕಮಲದ(ಬಿಜೆಪಿ) ಚಿಹ್ನೆಯನ್ನು ಪ್ರತಿನಿಧಿಸುವ ಚಕ್ರವ್ಯೂಹದಲ್ಲಿ ಸಿಕ್ಕಿಹಾಕಿಕೊಂಡಿದೆ. ಅದನ್ನು ಆರು ಮಂದಿ ನಿಯಂತ್ರಿಸಿಸುತ್ತಿದ್ದಾರೆ. 21 ನೇ ಶತಮಾನದಲ್ಲಿ ಹೊಸ ಚಕ್ರವ್ಯೂಹದ ರೂಪ ತಾಳಿರುವ ಕಮಲವನ್ನು ಪ್ರಧಾನಿ ಮೋದಿ ಅವರು ಎದೆಯ ಮೇಲೆ ಧರಿಸಿಕೊಂಡಿರುತ್ತಾರೆ.
ಅಂದು ಅಭಿಮನ್ಯುವಿನೊಂದಿಗೆ ಏನು ಮಾಡಲಾಗಿಯೆಯೋ ಅದನ್ನೇ ಇಂದು ನಮ್ಮ ದೇಶದ ರೈತರು, ಕಾರ್ಮಿಕರು ಮಾಡಲಾಗುತ್ತಿದೆ ಎಂದು ಟೀಕಿಸಿದರು.
ಅಂದು ಆರು ಮಂದಿ ಸೇರಿ ಚಕ್ರವ್ಯೂಹ ರಚಿಸಿ ಅಭಿಮನ್ಯುವನ್ನು ಕೊಲೆ ಮಾಡಿದರು. ಇಂದು ಕೇಂದ್ರ ಸರ್ಕಾರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್, ಉದ್ಯಮಪತಿಗಳಾದ ಅಂಬಾನಿ ಹಾಗೂ ಅದಾನಿ ಸೇರಿ ಚಕ್ರವ್ಯೂಹ ರಚಿಸಿಕೊಂಡಿದ್ದಾರೆ ಎಂದು ರಾಹುಲ್‌ಗಾಂಧಿ ಅಭಿಪ್ರಾಯಿಸಿದರು.





