ನವದೆಹಲಿ: 18 ನೇ ಲೋಕಸಭೆಯ ಮೊದಲ ಅಧಿವೇಶನದ ಇಂದು(ಜೂ.24) ಆರಂಭವಾಗಿದೆ. ಈ ಅಧಿವೇಶನಕ್ಕೆ ಇಂಡಿಯಾ ಮೈತ್ರಿಕೂಟದ ನಾಯಕರು ಸಂವಿಧಾನ ಪುಸ್ತಕಗಳನ್ನು ಕೈಯಲ್ಲಿ ಹಿಡಿದು ಬಿಜೆಪಿ ಸಂವಿಧಾನದಕ್ಕೆ ಅಗೌರವ ತೋರುತ್ತಿದೆ. ʼಇಂಡಿಯಾʼ ಸಂವಿಧಾನವನ್ನು ರಕ್ಷಿಸುತ್ತದೆ ಎಂಬ ಘೋಷಣೆಗಳೊಂದಿಗೆ ಸಂಸತ್ ಪ್ರವೇಶಿಸಿದರು.
ಈ ಮೂಲಕ ಇಂಡಿಯಾ ಮೈತ್ರಿಕೂಟವು ಒಗ್ಗಟ್ಟು ಪ್ರದರ್ಶಿಸಿ, ಸಂವಿಧಾನದ ರಕ್ಷಣೆಯ ಹೊಣೆ ನಮ್ಮದು, ನಾವು ಸಂವಿಧಾನ ಉಳಿಸುತ್ತೇವೆ ಎಂದು ಸಾರಿ ಹೇಳಿದೆ. ಈ ವೇಳೆ ಕಾಂಗ್ರೆಸ್ ನಾಯಕ ಕೆ.ಸಿ ವೇಣುಗೋಪಾಲ್ ಇಂಡಿಯಾದ ನಾಯಕರನ್ನು ʼಪ್ರಜಾಪ್ರಭುತ್ವದ ರಕ್ಷಕರುʼ ಎಂದು ಕರೆದರು. ಈ ವೇಳೆ ಇಂಡಿಯಾದ ಎಲ್ಲಾ ನಾಯಕರು ಸಂವಿಧಾನದ ಪುಸ್ತಕವನ್ನು ಹಿಡಿದುಕೊಂಡಿದ್ದರು.
ಸಂವಿಧಾನ ಉಳಿಸಲು ಜನರು ವಿರೋಧ ಪಕ್ಷಗಳನ್ನು ಬೆಂಬಲಿಸಿದ್ದಾರೆ ಎನ್ನುವುದು ಈ ಬಾರಿಯ ಚುನಾವಣಾ ಫಲಿತಾಂಶಗಳು ತೋರಿಸುತ್ತವೆ ಎಂದು ಇಂಡಿಯಾ ನಾಯಕರ ಹೇಳಿದರು.
ಈ ವೇಳೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮೋದಿ ಅವರು ಸಂವಿಧಾನ ಒಡೆಯಲು ಯತ್ನಿಸಿದ್ದಾರೆ, ಅದಕ್ಕಾಗಿಯೇ ಇಂಡಿಯಾ ನಾಯಕರು ಇಂದು ಒಗ್ಗೂಡಿ ಸಂವಿಧಾನ ವಿರೋಧಿಗಳಿಗೆ ಎಚ್ಚರಿಕೆ ನೀಡಿದೆ. ಜೊತೆಗೆ ಮೋದಿಜಿ ಅವರು ಸಂವಿಧಾನ ಪ್ರಕಾರ ಆಡಳಿತ ನಡೆಸಬೇಕು ಎಂದು ತೋರಿಸಲು ಬಯಸುತ್ತೇವೆ ಎಂದರು.
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…
ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…
ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…