ದೇಶ- ವಿದೇಶ

India-New Zealand | ಮುಕ್ತ ವ್ಯಾಪಾರ ಒಪ್ಪಂದ : ಭಾರಿ ಪ್ರಮಾಣದ ಸುಂಕ ಕಡಿತ

ವೆಲ್ಲಿಂಗ್ಟನ್ : ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆ ಅಂತಿಮವಾಗಿದೆ ಎಂದು ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲುಕ್ಸನ್ ಸೋಮವಾರ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅವರು ಪೋಸ್ಟ್ ಮಾಡಿದ್ದು, ಮುಕ್ತ ವ್ಯಾಪಾರ ಒಪ್ಪಂದವು ಭಾರತಕ್ಕೆ ನಮ್ಮ ರಫ್ತಿನ ಶೇ. ೯೫ ರಷ್ಟು ಸುಂಕವನ್ನು ಕಡಿಮೆ ಮಾಡುತ್ತದೆ ಅಥವಾ ರದ್ದುಗೊಳಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಮುಕ್ತ ವ್ಯಾಪಾರ ಒಪ್ಪಂದದಿಂದ ಮುಂಬರುವ ಎರಡು ದಶಕಗಳಲ್ಲಿ ಭಾರತಕ್ಕೆ ನ್ಯೂಜಿಲೆಂಡ್ ರಫ್ತುಗಳು ವರ್ಷಕ್ಕೆ ೧.೧ ಬಿಲಿಯನ್ ಡಾಲರ್‌ನಿಂದ (ಶತಕೋಟಿ) ೧.೩ ಬಿಲಿಯನ್ ಡಾಲರ್‌ಗೆ (ಶತಕೋಟಿ) ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಉಭಯ ರಾಷ್ಟ್ರಗಳ ವ್ಯಾಪಾರ ಒಪ್ಪಂದ ಅಂತಿಮವಾದ ನಂತರ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡಿದ್ದೇನೆ ಎಂದು ಅವರು ಹೇಳಿದ್ದಾರೆ.

ಈ ಒಪ್ಪಂದವು ಎರಡು ದೇಶಗಳ ನಡುವಿನ ಸ್ನೇಹವನ್ನು ಬಲಪಡಿಸುತ್ತದೆ. ಭಾರತವು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗಿದ್ದು, ಹೊಸ ಒಪ್ಪಂದವು ೧.೪ ಶತಕೋಟಿ ಭಾರತೀಯ ಗ್ರಾಹಕರು ನ್ಯೂಜಿಲೆಂಡ್‌ನೊಂದಿಗೆ ವ್ಯವಹಾರ ಮಾಡಲು ಅವಕಾಶ ಕಲ್ಪಿಸುತ್ತದೆ ಎಂದು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

7 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

7 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

8 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

8 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

9 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

9 hours ago