ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ ಮತ್ತು ಶಕ್ತಿಯನ್ನು ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.
ಭಾರತ -ಒಮಾನ್ ವ್ಯಾಪಾರ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಈ ಶೃಂಗಸಭೆಯು ಭಾರತ ಮತ್ತು ಒಮಾನ್ ಸಹಭಾಗಿತ್ವಕ್ಕೆ ಹೊಸ ನಿರ್ದೇಶನ ನೀಡಲಿದೆ. ಇಂದು ನಾವು ಐತಿಹಾಸಿಕ ನಿರ್ಧಾರಕ್ಕೆ ಬಂದಿದ್ದು, ಮುಂಬರುವ ಹಲವು ದಶಕಗಳವರೆಗೆ ಈ ತೀರ್ಮಾನದ ಪ್ರತಿಧ್ವನಿ ಇರಲಿದೆ ಎಂದು ಪ್ರಧಾನಿ ಬಣ್ಣಿಸಿದ್ದಾರೆ.
ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ, ಅಂದರೆ ಸಿಇಪಿಎ, ೨೧ನೇ ಶತಮಾನದಲ್ಲಿ ನಮ್ಮ ಪಾಲುದಾರಿಕೆಗೆ ಹೊಸ ವಿಶ್ವಾಸ ಮತ್ತು ಹೊಸ ಶಕ್ತಿಯನ್ನು ನೀಡುತ್ತದೆ ಎಂದಿದ್ದಾರೆ.
ಇದನ್ನೂ ಓದಿ:-ನೇಮಕಾತಿ ವಿಳಂಬ | ಪ್ರತಿಧ್ವನಿಸಿದ ಪ್ರತಿಭಟನೆಗಳು
ಭಾರತವೂ ಸದಾ ಪ್ರಗತಿ ಮತ್ತು ಸ್ವಾವಲಂಬಿಯಾಗಿದ್ದು, ಭಾರತದ ಬೆಳವಣಿಗೆಯು ಸ್ನೇಹಿತ ದೇಶಗಳ ಬೆಳವಣಿಗೆಗೆ ಕೂಡ ಕಾರಣವಾಗಿದೆ. ಭಾರತವೂ ದೇಶದ ಮೂರನೇ ಆರ್ಥಿಕ ದೇಶವಾಗುವತ್ತ ಸಾಗಿದೆ. ಇದು ಇಡೀ ಜಗತ್ತಿಗೆ ಪ್ರಯೋಜನಕಾರಿಯಾಗಲಿದೆ. ಒಮನ್‌ಗೆ ಮತ್ತಷ್ಟು ಸಹಾಯಕವಾಗಲಿದೆ. ನಮ್ಮ ಜನರು ಪರಸ್ಪರರ ಬಗ್ಗೆ ತಿಳಿದಿದ್ದಾರೆ. ವ್ಯಾಪಾರ ಸಂಬಂಧದಲ್ಲಿ ನಾವು ನಂಬಿಕೆಯನ್ನು ಹೊಂದಿದ್ದು, ಪರಸ್ಪರ ಮಾರುಕಟ್ಟೆಗಳನ್ನು ಅರಿತಿದ್ದೇವೆ ಎಂದು ಮೋದಿ ತಿಳಿಸಿದರು.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…
ಬೆಳಗಾವಿ : ಶೀಘ್ರದಲ್ಲೇ 3600 ಸಿಬ್ಬಂದಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ವಿಧಾನಪರಿಷತ್‌ಗೆ ತಿಳಿಸಿದ್ದಾರೆ. ಸದಸ್ಯ ಜಗದೇವ್…