ಜಮ್ಮು-ಕಾಶ್ಮೀರ: ಇಲ್ಲಿನ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ-ಪಾಕಿಸ್ತಾನ (India-Pakistan) ಸಂಬಂಧ ಮತ್ತಷ್ಟು ಹಳಸಿ ಹೋಗಿದೆ.
ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕಿಸ್ತಾನ ಸೇನೆ ಸತತ 5ನೇ ದಿನವೂ ಕದನ ವಿರಾಮ ಉಲ್ಲಂಘನೆ ಮಾಡಿದೆ.
ಜಮ್ಮು-ಕಾಶ್ಮೀರದ ಹಲವು ಭಾಗಗಳಲ್ಲಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಸೇನೆ ದಿಟ್ಟ ಉತ್ತರ ನೀಡುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಭಯ ರಾಷ್ಟ್ರಗಳ ಸೇನೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಯಾವುದೇ ನೋವುಗಳು ವರದಿಯಾಗಿಲ್ಲ.
ಉತ್ತರ ಕಾಶ್ಮೀರದ ಕುಪ್ವಾರಾ ಮತ್ತು ಬಾರಾಮುಲ್ಲಾ ಜಿಲ್ಲೆಗಳ ಎಲ್‌ಒಸಿ ಉದ್ದಕ್ಕೂ ಹಲವಾರು ಪೋಸ್ಟ್‌ಗಳ ಮೇಲೆ ಅಪ್ರಚೋದಿತ ಗುಂಡಿನ ದಾಳಿಯಿಂದ ಪ್ರಾರಂಭಿಸಿದ್ದ ಪಾಕಿಸ್ತಾನವು, ಇದೀಗ ಪೂಂಚ್ ವಲಯ ಹಾಗೂ ಅಖ್ನೂರ್‌ನಲ್ಲೂ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ.





