ದೇಶ- ವಿದೇಶ

ಪಾಕ್‌ನಿಂದ ಸತತ 5ನೇ ದಿನವೂ ಕದನ ವಿರಾಮ ಉಲ್ಲಂಘನೆ: ಭಾರತೀಯ ಸೇನೆ ದಿಟ್ಟ ಉತ್ತರ

ಜಮ್ಮು-ಕಾಶ್ಮೀರ: ಇಲ್ಲಿನ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ-ಪಾಕಿಸ್ತಾನ (India-Pakistan) ಸಂಬಂಧ ಮತ್ತಷ್ಟು ಹಳಸಿ ಹೋಗಿದೆ.

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕಿಸ್ತಾನ ಸೇನೆ ಸತತ 5ನೇ ದಿನವೂ ಕದನ ವಿರಾಮ ಉಲ್ಲಂಘನೆ ಮಾಡಿದೆ.

ಜಮ್ಮು-ಕಾಶ್ಮೀರದ ಹಲವು ಭಾಗಗಳಲ್ಲಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಸೇನೆ ದಿಟ್ಟ ಉತ್ತರ ನೀಡುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಭಯ ರಾಷ್ಟ್ರಗಳ ಸೇನೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಯಾವುದೇ ನೋವುಗಳು ವರದಿಯಾಗಿಲ್ಲ.

ಉತ್ತರ ಕಾಶ್ಮೀರದ ಕುಪ್ವಾರಾ ಮತ್ತು ಬಾರಾಮುಲ್ಲಾ ಜಿಲ್ಲೆಗಳ ಎಲ್‌ಒಸಿ ಉದ್ದಕ್ಕೂ ಹಲವಾರು ಪೋಸ್ಟ್‌ಗಳ ಮೇಲೆ ಅಪ್ರಚೋದಿತ ಗುಂಡಿನ ದಾಳಿಯಿಂದ ಪ್ರಾರಂಭಿಸಿದ್ದ ಪಾಕಿಸ್ತಾನವು, ಇದೀಗ ಪೂಂಚ್‌ ವಲಯ ಹಾಗೂ ಅಖ್ನೂರ್‌ನಲ್ಲೂ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

6 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

6 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

7 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

10 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

13 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

13 hours ago