ನವದೆಹಲಿ: ಕದನ ವಿರಾಮ ಒಪ್ಪಂದ ಘೋಷಣೆಯಾದ ಕೆಲವೇ ಗಂಟೆಗಳಲ್ಲಿ ಪಾಕಿಸ್ತಾನ ಒಪ್ಪಂದ ಉಲ್ಲಂಘಿಸಿದ್ದು, ಭಾರತೀಯ ಸೇನೆ ಪ್ರತ್ಯುತ್ತರ ನೀಡಿದೆ.
ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ ಕೆಲವೇ ಗಂಟೆಗಳಲ್ಲಿ ಪಾಕಿಸ್ತಾನ ಮತ್ತೊಮ್ಮೆ ಭಾರತಕ್ಕೆ ದ್ರೋಹ ಬಗೆದು ಕದನ ವಿರಾಮವನ್ನು ಉಲ್ಲಂಘಿಸಿದೆ.
ಜಮ್ಮು-ಕಾಶ್ಮೀರದ ಅಖ್ನೂರ್‌ನಲ್ಲಿ ಡ್ರೋನ್‌ಗಳು ಕಾಣಿಸಿದ ನಂತರ ರಾಜಸ್ಥಾನದ ಜೈಸಲ್ಮೇರ್, ಬಾರ್ಮರ್, ಗುಜರಾತಿನ ಕಚ್ ಮತ್ತಿತರ ಅನೇಕ ಗಡಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಡ್ರೋನ್ ಹಾರಾಟದ ದೃಶ್ಯಗಳು ಕಂಡುಬಂದವು.
ಇದಕ್ಕೆ ಭಾರತೀಯ ಸೇನೆ ಪ್ರತ್ಯುತ್ತರ ನೀಡಿದ್ದು, ಎಲ್ಲಾ ಡ್ರೋನ್‌ಗಳನ್ನು ಹೊಡೆದು ಹಾಕಿದೆ.





