ಪ್ರಯಾಗ್ ರಾಜ್: ತುರ್ತು ಪರಿಸ್ಥಿತಿ ಕಾಲದಿಂದಲೂ ಜನಸಂಖ್ಯೆ ನಿಯಂತ್ರಣದತ್ತ ಭಾರತೀಯರು ಗಮನ ಹರಿಸಿಲ್ಲ ಎಂದು ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣಮೂರ್ತಿ ಕಳವಳ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಭಾರತವು ಜನಸಂಖ್ಯೆ ತಲಾ ಭೂಮಿ ಲಭ್ಯತೆ ಮತ್ತು ಆರೋಗ್ಯ ಸೌಲಭ್ಯಗಳಿಗೆ ಸಂಬಂಧಿಸಿದ ಮಹತ್ವದ ಸವಾಲುಗಳನ್ನು ಎದುರಿಸುತ್ತಿದೆ ಎಂದರು.
ತುರ್ತು ಪರಿಸ್ಥಿತಿ ಕಾಲದಿಂದಲೂ ನಾವು ಭಾರತೀಯರು ಜನಸಂಖ್ಯಾ ನಿಯಂತ್ರಣಕ್ಕೆ ಸಾಕಷ್ಟು ಗಮನ ಹರಿಸಿಲ್ಲ. ಇದು ನಮ್ಮ ದೇಶವನ್ನು ಸುಸ್ಥಿರಗೊಳಿಸುವಲ್ಲಿ ಅಪಾಯವನ್ನು ಉಂಟುಮಾಡುತ್ತದೆ ಎಂದು ಹೇಳಿದರು.
ಯುಎಸ್, ಬ್ರೆಜಿಲ್ ಮತ್ತು ಚೀನಾ ದೇಶಗಳಿಗೆ ಹೋಲಿಸಿದರೆ ಅವುಗಳು ಹೆಚ್ಚಿನ ಭೂಮಿ ಲಭ್ಯತೆ ಹೊಂದಿವೆ. ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡುವುದು ನಿಜವಾದ ವೃತ್ತಿಪರನ ಜವಾಬ್ದಾರಿಯಾಗಿದೆ.
ಒಂದು ತಲೆಮಾರು ಮುಂದಿನವರ ಬದುಕನ್ನು ಹಸನಾಗಿಸಲು ಹಲವಾರು ತ್ಯಾಗಗಳನ್ನು ಮಾಡಬೇಕು. ನನ್ನ ಪ್ರಗತಿಗಾಗಿ ನನ್ನ ತಂದೆ-ತಾಯಿ, ಒಡಹುಟ್ಟಿದವರು ಮತ್ತು ಶಿಕ್ಷಕರು ಗಣನೀಯ ತ್ಯಾಗ ಮಾಡಿದ್ದಾರೆ ಎಂದರು.
ಜನಸಂಖ್ಯಾ ನಿಯಂತ್ರಣದತ್ತ ನಾವು ಮಹತ್ವದ ಹೆಜ್ಜೆ ಇಡಬೇಕು. ಜನಸಂಖ್ಯೆ ನಿಯಂತ್ರಣಕ್ಕೆ ನಾವು ಸಹ ಕೈಜೋಡಿಸಬೇಕು ಎಂದು ಕರೆಕೊಟ್ಟರು.
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ.…
ಬೆಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಶೇ.86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ https:karresults.nic.in ನಲ್ಲಿ…
ಟೆಲ್‌ಅವೀವ್: ಕದನ ವಿರಾಮದ ನಡುವೆಯೂ ಲೆಬನಾನ್‌ನಲ್ಲಿ ಇಸ್ರೇಲ್ ಏರ್‌ಸ್ಟೈಕ್ ನಡೆಸಿ ಹಿಜ್ಬುಲ್ಲಾ ಮುಖ್ಯಸ್ಥ ನಯಿಮ್ ಕಾಸೆಮ್‌ನ ಸೋದರಳಿಯ ಯೂಸುಫ್ ಹರ್ಷಿಯನ್ನು…
ಟೆಹ್ರಾನ್ : ಅಮೆರಿಕ ಮತ್ತು ಇರಾನ್ ಮಧ್ಯೆ ಕದನ ವಿರಾಮ ಘೋಷಣೆಯಾದ ಬಳಿಕ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್…
ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಏಪ್ರಿಲ್.15ಕ್ಕೆ ಮುಂದೂಡಿಕೆಯಾಗಿದೆ. ಜನಪ್ರತಿನಿಧಿಗಳ ವಿಶೇಷ…
ಚಿಕ್ಕಮಗಳೂರು : ಜಿಲ್ಲೆಯ ದತ್ತಪೀಠದ ತಪ್ಪಲಿನ ಮಾಣಿಕ್ಯಾಧಾರಕ್ಕೆ ಕುಟುಂಬದ ಜೊತೆ ಬಂದಿದ್ದ 15 ವರ್ಷದ ಬಾಲಕಿ ಶ್ರೀನಂದಾ ಇದ್ದಕ್ಕಿದ್ದಂತೆ ಆ…