ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಭಯೋತ್ಪಾದಕರ ಗುಂಡಿನ ದಾಳಿ ಬಗ್ಗೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಉಗ್ರರ ದಾಳಿಯಾಗಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನದೊಂದಿಗೆ ಭಾರತವು ಎಲ್ಲಾ ರೀತಿಯ ಕ್ರಿಕೆಟ್ ಸಂಬಂಧವನ್ನು ಕಡಿದುಕೊಳ್ಳಬೇಕು. ಐಸಿಸಿ ಮತ್ತು ಏಷ್ಯನ್ ಟೂರ್ನಿಗಳಲ್ಲಿಯೂ ಆಡಬಾರದು ಎಂದು ಆಗ್ರಹಿಸಿದರು.
ಪ್ರತಿ ವರ್ಷವೂ ಭಾರತದ ನೆಲದಲ್ಲಿ ಉಗ್ರರ ಅಟ್ಟಹಾಸ ನಡೆಯುತ್ತಿದೆ. ಅದನ್ನು ಈಗ ಯಾರೂ ಸಹಿಸಬಾರದು. ಭಯೋತ್ಪಾದನೆಯನ್ನು ಸಹಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.





