ಭಾಗಲ್‌ಪುರ್(ಬಿಹಾರ): ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಸಂವಿಧಾನವನ್ನು ರದ್ದುಗೊಳಿಸಿ ಬಹುಸಂಖ್ಯಾತ ಭಾರತರನ್ನು ವಿಫಲಗೊಳಿಸಲು ಯತ್ನಿಸುತ್ತಿದೆ. ಆದರೆ ಪ್ರಜಾಪ್ರಭುತ್ವದ ಹಿತರಕ್ಷಣೆಗಾಗಿ ಹೋರಾಟ ಮಾಡುತ್ತಿರುವ ʻಇಂಡಿಯಾʼ ಮೈತ್ರಿಕೂಟ ಬಿಜೆಪಿಯ ಎಲ್ಲಾ ಯತ್ನವನ್ನು ವಿಫಲಗೊಳಿಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಬಿಹಾರದ ಭಾಗಲ್‌ಪುರದಲ್ಲಿ ಶುಕ್ರವಾರ ನಡೆದ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ-ಆರ್‌ಎಸ್‌ಎಸ್ ಸಂವಿಧಾನವನ್ನು ರದ್ದುಗೊಳಿಸಲು ಸಂಚು ರೂಪಿಸಿದೆ. ಭಾರತದ ಬಡವರು, ದಲಿತರು, ಬುಡಕಟ್ಟು ಸಮುದಾಯದವರಿಗೆ ದೊರಕಿರುವ ಸೌಲಭ್ಯಗಳೆಲ್ಲಾ ಸಂವಿಧಾನದಿಂದ ಬಂದದ್ದು, ಒಂದು ವೇಳೆ ಸಂವಿಧಾನವನ್ನು ಬದಲಾಯಿಸಿದರೆ ನಿಮ್ಮ ಸೌಲಭ್ಯಗಳೆಲ್ಲಾ ಕೊನೆಗೊಳ್ಳಲಿದೆ ಎಂದು ರಾಹುಲ್ ಗಾಂಧಿ ಆತಂಕ ವ್ಯಕ್ತಪಡಿಸಿದರು.
ಮೋದಿ ಸರ್ಕಾರ ದೇಶದ ಕೆಲವೇ ಕೆಲ ಶ್ರೀಮಂತರ ಪರವಾಗಿ ಇದೆ. ಇಡೀ ದೇಶದ ಸಂಪತ್ತು ಕೇವಲ 22 ಜನರಲ್ಲಿ ಇದೆ. ಇದನ್ನು ಬದಲಾಯಿಸಲು ನಾವು ಬಯಸುತ್ತೇವೆ ಎಂದರು.
ಬಿಜೆಪಿ ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನ ಗೆಲ್ಲುತ್ತೇವೆ ಎಂದು ಹೇಳುತ್ತಿದೆ. ಆದರೆ ವಾಸ್ತವವಾಗಿ 150 ಸ್ಥಾನಗಳನ್ನು ಅದು ಗೆಲ್ಲುವುದಿಲ್ಲ ಎಂದು ಹೇಳಿದರು.
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…