Mysore
29
light rain

Social Media

ಬುಧವಾರ, 05 ಆಗಸ್ಟ್ 2026
Light
Dark

ಭಯೋತ್ಪಾದನೆಗೆ ಭಾರತ ಎಂದಿಗೂ ತಲೆಬಾಗುವುದಿಲ್ಲ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಒಂದು ವರ್ಷದ ಹಿಂದೆ ಜಮ್ಮು-ಕಾಶ್ಮೀರದ ಪಹಲ್ಗಾಮ್‌ನ ಬೈಸರನ್‌ ಕಣಿವೆ ಪ್ರದೇಶದಲ್ಲಿ ನಡೆದ ಉಗ್ರರ ಕೃತ್ಯಕ್ಕೆ ಒಂದು ವರ್ಷ ಪೂರ್ಣಗೊಂಡಿದೆ.

ಈ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೃತರನ್ನು ನೆನೆದು ಕಂಬನಿ ಮಿಡಿದಿದ್ದಾರೆ.

ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಪಹಲ್ಗಾಮ್‌ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ 26 ಮಂದಿಗೆ ಸಂತಾಪ ಸೂಚಿಸಿದ್ದಾರೆ.

ಕಳೆದ ವರ್ಷ ಈ ದಿನದಂದು ನಡೆದ ಭೀಕರ ಪಹಲ್ಗಾಮ್‌ ಭಯೋತ್ಪಾದಕ ದಾಳಿಯಲ್ಲಿ ಬಲಿಯಾದ ಮುಗ್ಧ ಜೀವಗಳನ್ನು ನೆನೆಪಿಸಿಕೊಳ್ಳುತ್ತಿದ್ದೇನೆ. ಅವರನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಈ ನಷ್ಟವನ್ನು ನಿಭಾಯಿಸುತ್ತಿರುವ ದುಃಖಿತ ಕುಟುಂಬಗಳೊಂದಿಗೆ ನನ್ನ ಆಲೋಚನೆಗಳು ಸಹ ಇವೆ. ಒಂದು ರಾಷ್ಟ್ರವಾಗಿ, ನಾವು ದುಃಖ ಮತ್ತು ದೃಢಸಂಕಲ್ಪದಲ್ಲಿ ಒಗ್ಗಟ್ಟಿನಿಂದ ನಿಲ್ಲುತ್ತೇವೆ ಎಂದು ಭಾವುಕರಾಗಿದ್ದಾರೆ.

ಭಾರತ ಯಾವುದೇ ರೀತಿಯ ಭಯೋತ್ಪಾದನೆಗೆ ಎಂದಿಗೂ ತಲೆಬಾಗಲ್ಲ. ಭಯೋತ್ಪಾದಕರ ಹೇಯ ಯೋಜನೆಗಳು ಎಂದಿಗೂ ಯಶಸ್ವಿಯಾಗುವುದಿಲ್ಲ ಎಂದು ಗುಡುಗಿದ್ದಾರೆ.

 

Tags:
error: Content is protected !!