ನವದೆಹಲಿ: ಒಂದು ವರ್ಷದ ಹಿಂದೆ ಜಮ್ಮು-ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಕಣಿವೆ ಪ್ರದೇಶದಲ್ಲಿ ನಡೆದ ಉಗ್ರರ ಕೃತ್ಯಕ್ಕೆ ಒಂದು ವರ್ಷ ಪೂರ್ಣಗೊಂಡಿದೆ.
ಈ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೃತರನ್ನು ನೆನೆದು ಕಂಬನಿ ಮಿಡಿದಿದ್ದಾರೆ.
ಎಕ್ಸ್ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ 26 ಮಂದಿಗೆ ಸಂತಾಪ ಸೂಚಿಸಿದ್ದಾರೆ.
ಕಳೆದ ವರ್ಷ ಈ ದಿನದಂದು ನಡೆದ ಭೀಕರ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಬಲಿಯಾದ ಮುಗ್ಧ ಜೀವಗಳನ್ನು ನೆನೆಪಿಸಿಕೊಳ್ಳುತ್ತಿದ್ದೇನೆ. ಅವರನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಈ ನಷ್ಟವನ್ನು ನಿಭಾಯಿಸುತ್ತಿರುವ ದುಃಖಿತ ಕುಟುಂಬಗಳೊಂದಿಗೆ ನನ್ನ ಆಲೋಚನೆಗಳು ಸಹ ಇವೆ. ಒಂದು ರಾಷ್ಟ್ರವಾಗಿ, ನಾವು ದುಃಖ ಮತ್ತು ದೃಢಸಂಕಲ್ಪದಲ್ಲಿ ಒಗ್ಗಟ್ಟಿನಿಂದ ನಿಲ್ಲುತ್ತೇವೆ ಎಂದು ಭಾವುಕರಾಗಿದ್ದಾರೆ.
ಭಾರತ ಯಾವುದೇ ರೀತಿಯ ಭಯೋತ್ಪಾದನೆಗೆ ಎಂದಿಗೂ ತಲೆಬಾಗಲ್ಲ. ಭಯೋತ್ಪಾದಕರ ಹೇಯ ಯೋಜನೆಗಳು ಎಂದಿಗೂ ಯಶಸ್ವಿಯಾಗುವುದಿಲ್ಲ ಎಂದು ಗುಡುಗಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…