ನವದೆಹಲಿ: ಆಪರೇಷನ್ ಸಿಂಧೂರ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂದು ಕದನ ವಿರಾಮ ಘೋಷಣೆ ಬೆನ್ನಲ್ಲೇ ಭಾರತೀಯ ವಾಯುಸೇನೆ ಮಹತ್ವದ ಹೇಳಿಕೆ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಎನ್‌ಎಸ್‌ಎ ಅಜಿತ್ ಧೋವಲ್, ವಿದೇಶಾಂಗ ಸಚಿವ ಎಸ್.ಜೈಶಂಕರ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್, ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಭಾರತದ ವಾಯುಪಡೆ ಮುಖ್ಯಸ್ಥ ಅಮರ್ ಪ್ರೀತಿ ಸಿಂಗ್ ಮತ್ತು ಭಾರತೀಯ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಅವರೊಂದಿಗೆ ಉನ್ನತ ಮಟ್ಟದ ಸಭೆಯ ನಂತರ ಭಾರತೀಯ ವಾಯುಪಡೆಯಿಂದ ಈ ಹೇಳಿಕೆ ಬಂದಿದೆ.
ಇದನ್ನೂ ಓದಿ:- ಬ್ರಹ್ಮೋಸ್ ದಾಳಿಗೆ ಬೆಚ್ಚಿ ಕದನ ವಿರಾಮ ಮಾಡಿಸಿದ್ದ ಪಾಕ್
ಆಪರೇಷನ್ ಸಿಂಧೂರ ಕಾರ್ಯಾಚರಣೆ ಇನ್ನೂ ನಡೆಯುತ್ತಿರುವುದರಿಂದ ಸರಿಯಾದ ಸಮಯದಲ್ಲಿ ವಿವರವಾದ ಬ್ರೀಫಿಂಗ್‌ನ್ನು ನಡೆಸಲಾಗುವುದು. ಪರಿಶೀಲಿಸಿದ ಮಾಹಿತಿಯ ಊಹಾಪೋಹ ಮತ್ತು ಪ್ರಸರಣದಿಂದ ದೂರವಿರಲು ಐಎಎಫ್ ಎಲ್ಲರನ್ನೂ ಒತ್ತಾಯಿಸುತ್ತದೆ ಎಂದು ಹೇಳಿದೆ.





