ಹೊಸದಿಲ್ಲಿ : ಪಂಜಾಬ್‌ನ ಅಮೃತಸರದ ಹಲವೆಡೆ ಪಾಕಿಸ್ತಾನದ ಶಸ್ತ್ರಸಜ್ಜಿತ ಡ್ರೋನ್ ದಾಳಿಯನ್ನು ವಿಫಲಗೊಳಿಸುಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಕ್ಷಣಾ ಸಚಿವಾಲಯ, ಪಾಕಿಸ್ತಾನವು ಡ್ರೋನ್ ದಾಳಿ ಮತ್ತು ಯುದ್ಧಸಾಮಾಗ್ರಿಗಳೊಂದಿಗೆ ಪರಿಸ್ಥಿತಿಯನ್ನು ಉಲ್ಬಣಗೊಳಿಸುವುದನ್ನು ಮುಂದುವರೆಸಿದೆ ಎಂದು ಹೇಳಿದೆ.
ಇಂದು ಬೆಳಿಗ್ಗೆ 5 ಗಂಟೆಗೆ ಅಮೃತಸರದ ಹಲವೆಡೆ ಪಾಕ್ ಡ್ರೋನ್‌ಗಳು ಪತ್ತೆಯಾಗಿದೆ, ಅವುಗಳನ್ನು ಭಾರತೀಯ ವಾಯು ರಕ್ಷಣಾ ಪಡೆಗಳ ನಾಶಪಡಿಸಿದೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:- ಮೈಸೂರು | ಗಾಂಜಾ ಸಂಗ್ರಹ ; ಮಹಿಳೆ ಪೊಲೀಸ್ ವಶಕ್ಕೆ
ಜಮ್ಮು ಮತ್ತು ಕಾಶ್ಮೀರದಿಂದ ಗುಜರಾತ್‌ವರೆಗೆ ಭಾರತದ 26 ಸ್ಥಳಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಶುಕ್ರವಾರ ರಾತ್ರಿ ಡ್ರೋನ್ ದಾಳಿ ಮಾಡಿದೆ. ಈ ಎಲ್ಲಾ ಪ್ರಯತ್ನಗಳನ್ನು ವಿಫಲಗೊಳಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದು ರಕ್ಷಣಾ ಸಚಿವಾಲಯ ಹೇಳಿದೆ.
ಅಂತರರಾಷ್ಟ್ರೀಯ ಗಡಿ ಮತ್ತು ಎಲ್‌ಒಸಿಯ ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಪಾಕ್ ಡ್ರೋನ್ ಹಾರಿಸಲಾಗಿದೆ. ಸ್ಥಳೀಯ ಕುಟುಂಬದ ಸದಸ್ಯರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನಾಗರಿಕರು ಅನಗತ್ಯವಾಗಿ ಹೊರಗಡೆ ಓಡಾಡಬಾರದು. ಜೊತೆಗೆ ಸುರಕ್ಷತಾ ಸೂಚನೆಗಳನ್ನು ಪಾಲಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…