Mysore
32
few clouds

Social Media

ಸೋಮವಾರ, 27 ಏಪ್ರಿಲ 2026
Light
Dark

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ ಗುಂಡಿನ ದಾಳಿ ನಡೆದಿದೆ. ದಾಳಿಯಿಂದ ಹಡಗು ದಿಕ್ಕು ಬದಲಿಸಿ ಹಿಂತಿರುಗಿದೆ ಎಂದು ಮೂಲಗಳು ತಿಳಿಸಿವೆ.

ಶನಿವಾರ ಇರಾನ್‌ನ ರೆವಲ್ಯೂಷನರಿ ಗಾರ್ಡ್‌ಗೆ ಸೇರಿದ ಎರಡು ಗನ್‌ಬೋಟ್‌ಗಳು ಜಲಸಂಧಿ ದಾಟುತ್ತಿದ್ದ ಟ್ಯಾಂಕರ್‌ಗಳ ಮೇಲೆ ಗುಂಡು ಹಾರಿಸಿವೆ ಎಂದು ಯುಕೆ ಮ್ಯಾರಿಟೈಮ್ ಟ್ರೇಡ್ ಆಪರೇಷನ್ಸ್ ವರದಿ ಮಾಡಿದೆ. ಈ ದಾಳಿಯಲ್ಲಿ ಭಾರತೀಯ ಟ್ಯಾಂಕರ್ ಸೇರಿದಂತೆ ಹಲವು ವಾಣಿಜ್ಯ ಹಡಗುಗಳು ತಮ್ಮ ಮಾರ್ಗ ಬದಲಾಯಿಸಿ ಹಿಂತಿರುಗಿವೆ.

ಅಸೋಸಿಯೇಟೆಡ್ ಪ್ರೆಸ್ ಪ್ರಕಾರ, ಸುಮಾರು 2 ಮಿಲಿಯನ್ ಬ್ಯಾರೆಲ್ ಇರಾಕಿ ಕಚ್ಚಾ ತೈಲ ಸಾಗಿಸುತ್ತಿದ್ದ ಭಾರತೀಯ ಧ್ವಜದ ಸೂಪರ್ ಟ್ಯಾಂಕರ್ ಮೇಲೆ ಈ ದಾಳಿ ನಡೆದಿದೆ. ಹಡಗು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಹಡಗಿನ ಹೆಸರು ಅದು ತಲುಪಬೇಕಿದ್ದ ಸ್ಥಳವನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ.

ಜಗತ್ತಿನ ತೈಲ ಪೂರೈಕೆಯಲ್ಲಿ ಸುಮಾರು 20 ಶೇಕಡಾ ಪಾಲನ್ನು ಸಾಗಿಸುವ ಹಾರ್ಮುಝ್ ಜಲಸಂಧಿಯಲ್ಲಿ ಈ ಘಟನೆಯಿಂದ ಸಂಚಾರ ತೀವ್ರವಾಗಿ ಅಸ್ತವ್ಯಸ್ತವಾಗಿದೆ. ಅಮೆರಿಕದ ‘ಆಪರೇಷನ್ ಎಪಿಕ್ ಫ್ಯೂರಿ’ ಕ್ರಮಕ್ಕೆ ಪ್ರತಿಯಾಗಿ ಇರಾನ್ ಕೈಗೊಂಡ ನಡೆಗಳಿಂದ ಕಳೆದ ಏಳು ವಾರಗಳಿಂದ ಈ ಪ್ರದೇಶದಲ್ಲಿ ಉದ್ವಿಗ್ನತೆ ತೀವ್ರಗೊಂಡಿದೆ.

ಭಾರತ  ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Tags:
error: Content is protected !!