ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ ಗುಂಡಿನ ದಾಳಿ ನಡೆದಿದೆ. ದಾಳಿಯಿಂದ ಹಡಗು ದಿಕ್ಕು ಬದಲಿಸಿ ಹಿಂತಿರುಗಿದೆ ಎಂದು ಮೂಲಗಳು ತಿಳಿಸಿವೆ.
ಶನಿವಾರ ಇರಾನ್‌ನ ರೆವಲ್ಯೂಷನರಿ ಗಾರ್ಡ್‌ಗೆ ಸೇರಿದ ಎರಡು ಗನ್‌ಬೋಟ್‌ಗಳು ಜಲಸಂಧಿ ದಾಟುತ್ತಿದ್ದ ಟ್ಯಾಂಕರ್‌ಗಳ ಮೇಲೆ ಗುಂಡು ಹಾರಿಸಿವೆ ಎಂದು ಯುಕೆ ಮ್ಯಾರಿಟೈಮ್ ಟ್ರೇಡ್ ಆಪರೇಷನ್ಸ್ ವರದಿ ಮಾಡಿದೆ. ಈ ದಾಳಿಯಲ್ಲಿ ಭಾರತೀಯ ಟ್ಯಾಂಕರ್ ಸೇರಿದಂತೆ ಹಲವು ವಾಣಿಜ್ಯ ಹಡಗುಗಳು ತಮ್ಮ ಮಾರ್ಗ ಬದಲಾಯಿಸಿ ಹಿಂತಿರುಗಿವೆ.
ಅಸೋಸಿಯೇಟೆಡ್ ಪ್ರೆಸ್ ಪ್ರಕಾರ, ಸುಮಾರು 2 ಮಿಲಿಯನ್ ಬ್ಯಾರೆಲ್ ಇರಾಕಿ ಕಚ್ಚಾ ತೈಲ ಸಾಗಿಸುತ್ತಿದ್ದ ಭಾರತೀಯ ಧ್ವಜದ ಸೂಪರ್ ಟ್ಯಾಂಕರ್ ಮೇಲೆ ಈ ದಾಳಿ ನಡೆದಿದೆ. ಹಡಗು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಹಡಗಿನ ಹೆಸರು ಅದು ತಲುಪಬೇಕಿದ್ದ ಸ್ಥಳವನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ.
ಜಗತ್ತಿನ ತೈಲ ಪೂರೈಕೆಯಲ್ಲಿ ಸುಮಾರು 20 ಶೇಕಡಾ ಪಾಲನ್ನು ಸಾಗಿಸುವ ಹಾರ್ಮುಝ್ ಜಲಸಂಧಿಯಲ್ಲಿ ಈ ಘಟನೆಯಿಂದ ಸಂಚಾರ ತೀವ್ರವಾಗಿ ಅಸ್ತವ್ಯಸ್ತವಾಗಿದೆ. ಅಮೆರಿಕದ ‘ಆಪರೇಷನ್ ಎಪಿಕ್ ಫ್ಯೂರಿ’ ಕ್ರಮಕ್ಕೆ ಪ್ರತಿಯಾಗಿ ಇರಾನ್ ಕೈಗೊಂಡ ನಡೆಗಳಿಂದ ಕಳೆದ ಏಳು ವಾರಗಳಿಂದ ಈ ಪ್ರದೇಶದಲ್ಲಿ ಉದ್ವಿಗ್ನತೆ ತೀವ್ರಗೊಂಡಿದೆ.
ಭಾರತ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…