ದೆಹಲಿ: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆಗೆ ಸಂಬಂಧಿಸಿದಂತೆ ತ್ವರಿತವಾಗಿ ಕ್ರಮ ಕೈಗೊಂಡ ಕೇಂದ್ರ ಸರ್ಕಾರದ ನಿರ್ಧಾರಗಳನ್ನು ಭಾರತೀಯ ವೈದ್ಯಕೀಯ ಸಂಘ ಅಭಿನಂದಿಸಿದೆ.
ಮುಖ್ಯವಾಗಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಆರೋಗ್ಯ ಸಚಿವ ಜೆ.ಪಿ.ನಡ್ಡಾ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ವಿಶೇಷ ಕೃತಜ್ಞತೆ ಸಲ್ಲಿಸಿದೆ. ಈ ಬಗ್ಗೆ ಖುಷಿ ಹಂಚಿಕೊಂಡ ಭಾರತೀಯ ವೈದ್ಯಕೀಯ ಸಂಘವು ನೀಟ್ ಯುಜಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಸಂಬಂಧ ಸಮಗ್ರ ತನಿಖೆಗಾಗಿ ಸಿಬಿಐಗೆ ವರ್ಗಾಯಿಸಿದ್ದಕ್ಕಾಗಿ ಶಿಕ್ಷಣ ಸಚಿವಾಲಯಕ್ಕೆ ಕೃತಜ್ಞತೆ ಸಲ್ಲಿಸಿದೆ.
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ದುಷ್ಕೃತ್ಯ ಮತ್ತು ಅಕ್ರಮಗಳನ್ನು ತಡೆಗಟ್ಟುವ ಸಲುವಾಗಿ ಕಠಿಣ ಕಾನೂನು ಕ್ರಮ ಜಾರಿಗೊಳಿಸಿದ್ದಕ್ಕಾಗಿ ನಾವು ಸರ್ಕಾರವನ್ನು ಪ್ರಶಂಸಿಸುತ್ತೇವೆ. ಅಕ್ರಮದಲ್ಲಿ ಯಾರದ್ದೇ ಸಂಚಿದ್ದರೂ ಅವರಿಗೆ 10 ವರ್ಷಗಳ ಜೈಲು ಶಿಕ್ಷೆಯಾಗಬೇಕು ಹಾಗೂ ಕನಿಷ್ಠ 1 ಕೋಟಿ ರೂ ದಂಡ ವಿಧಿಸಬೇಕು ಎಂದು ಆಗ್ರಹಿಸಿದೆ.





