Mysore
14
clear sky

Social Media

ಶನಿವಾರ, 27 ಡಿಸೆಂಬರ್ 2025
Light
Dark

ಭಾರತೀಯ ಸೇನಾಪಡೆ ಕಾರ್ಯಾಚರಣೆ ಸ್ಥಗಿತ: ವಿದೇಶಾಂಗ ಸಚಿವ ಜೈಶಂಕರ್‌

ನವದೆಹಲಿ: ಉಗ್ರರ ವಿರುದ್ಧ ಭಾರತದ ಸಮರ ನಿರಂತರವಾಗಿರುತ್ತದೆ ಎಂದು ವಿದೇಶಾಂಗ ಸಚಿವ ಜೈಶಂಕರ್‌ ತಿಳಿಸಿದ್ದಾರೆ.

ಭಾರತ-ಪಾಕ್‌ ನಡುವೆ ಉಂಟಾಗಿದ್ದ ಕದನಕ್ಕೆ ಬ್ರೇಕ್‌ ಬಿದ್ದಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ವಿದೇಶಾಂಗ ಸಚಿವ ಜೈಶಂಕರ್‌ ಅವರು, ಉಗ್ರರ ವಿರುದ್ಧ ಭಾರತದ ಸಮರ ನಿರಂತರವಾಗಿರುತ್ತದೆ. ಸದ್ಯಕ್ಕೆ ಸೇನಾಪಡೆ ಕಾರ್ಯಾಚರಣೆ ಸ್ಥಗಿತಗೊಂಡಿದೆ. ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಗೆ ಸಮ್ಮತಿ ನೀಡಲಾಗಿದೆ ಎಂದು ತಿಳಿಸಿದರು.

ಇನ್ನು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮಧ್ಯಸ್ಥಿಕೆಯಲ್ಲಿ ಭಾರತ-ಪಾಕ್‌ ನಡುವೆ ಕದನ ವಿರಾಮ ಘೋಷಣೆ ಮಾಡಲಾಗಿದ್ದು, ಇಂದು ಸಂಜೆ 5 ಗಂಟೆಯಿಂದಲೇ ಕದನ ವಿರಾಮಕ್ಕೆ ಒಪ್ಪಿಗೆ ನೀಡಲಾಗಿದೆ.

ಮೇ.12ರಂದು ಎರಡೂ ದೇಶಗಳು ಮಾತುಕತೆ ನಡೆಸಲು ತೀರ್ಮಾನ ಮಾಡಲಾಗಿದ್ದು, ಅಂದಿನ ಮಾತುಕತೆಯತ್ತ ಎಲ್ಲರ ಚಿತ್ತ ನೆಟ್ಟಿದೆ.

Tags:
error: Content is protected !!