ನವದೆಹಲಿ: ಏಕಕಾಲದಲ್ಲಿ ಹಲವು ಸ್ಥಳಗಳಲ್ಲಿ ನಡೆದ ಸಾರ್ವಜನಿಕ ಸೇವಾ ಸಮಾರಂಭಕ್ಕೆ ತೆರಳುವಲ್ಲಿ ಹೆಚ್ಚು ಜನರಿಗೆ ತನ್ನ ಸೇವೆಯನ್ನು ಒದಗಿಸಿರುವ ಮೂಲಕ ಭಾರತೀಯ ರೈಲ್ವೆ ಸಚಿವಾಲಯ “ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್”ನಲ್ಲಿ ಸೇರ್ಪಡೆಗೊಂಡಿದೆ.
ರೈಲ್ವೆ ಸಚಿವಾಲಯವು ಇದೇ ಫೆ.26 ರಂದು ನರೇಂದ್ರ ಮೋದಿ ಅವರಿಂದ ವರ್ಚುವಲ್ ಮೂಲಕ ವಿವಿಧೆಡೆ ರೈಲ್ವೆ ಬ್ರಿಡ್ಜ್, ರೈಲು ನಿಲ್ದಾಣಗಳ ಶಂಕುಸ್ಥಾಪನೆ ನೆರವೇರಿಸಿದ್ದರು. ಇದು ದೇಶದ 2,140 ಯಾತ್ರಾ ಸ್ಥಳಗಳಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 40,19,516 ಜನರು ಭಾಗವಹಿಸಿದ್ದರು. ಇದರಿಂದ ಭಾರತೀಯ ರೈಲ್ವೆಯ ಬೃಹತ್ ಪ್ರಯತ್ನ ಹಾಗೂ ಕಾರ್ಯಕ್ಷಮತೆಯನ್ನು ಗುರುತಿಸುವ ಮೂಲಕ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ಗೌರವಿಸಿದೆ.
ಈ ಬಗ್ಗೆ ಸಂತಸ ಹಂಚಿಕೊಂಡಿರುವ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್, ರೈಲ್ವೆ ಜತೆ ಪ್ರಧಾನಿ ಮೋದಿ ಅವರು ವಿಶೇಷ ಭಾವನಾತ್ಮಕ ಸಂಬಂಧ ಇಟ್ಟುಕೊಂಡಿದ್ದಾರೆ ಎಂದು ಶ್ಲಾಘಿಸಿದರು.
ಜನರಿಂದ ಮತ್ತೊಮ್ಮೆ ಆಶೀರ್ವಾದ ಪಡೆದು ಜನ ಸೇವೆ ಮಾಡಲು ಮೋದಿ ಪ್ರಧಾನಿಯಾಗಿ ನೇಮಕಗೊಂಡಿದ್ದಾರೆ. ಕಳೆದ ಹತ್ತಯ ವರ್ಷಗಳಿಂದ ರೈಲ್ವೆ ಅಭಿವೃದ್ಧಿಗೆ ಮೋದಿ ಕೊಡುಗೆ ಅಪಾರ ಎಂದು ಬಣ್ಣಿಸಿದರು.
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…
ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…
ತಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಮಹಾತ್ಮಗಾಂಧಿಯವರನ್ನುಬ್ರಿಟಿಷರು ಬಂಧಿಸಲಿಲ್ಲ . ಏಕೆಂದರೆ ಗಾಂಧಿಜಿ ಯವರು ನ್ಯಾಯಯುತವಾಗಿ ಅಹಿಂಸಾ ತ್ಮಕವಾಗಿ ಸ್ವಾತಂತ್ರ್ಯ ಕೇಳುತ್ತಿದ್ದರು,…
ವಸಂತಕುಮಾರ್ ಮೈಸೂರಮಠ್, ಪರಿಸರವಾದಿ ಮತ್ತು ಸಾಮಾಜಿಕ ಕಾರ್ಯಕರ್ತ, ಮೈಸೂರು ಹೊರೆಯನ್ನು ಕಡಿಮೆ ಮಾಡಲು ಪರ್ಯಾಯ ಮಾರ್ಗವಿಲ್ಲವೇ? ಮೈಸೂರಿನ ಮಹಾನ್ ಯದುಕುಲ…
ಕೆ.ಬಿ.ರಮೇಶ ನಾಯಕ ಮೈಸೂರು: ಐದು ವರ್ಷಗಳಿಗೂ ಹೆಚ್ಚು ಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದ ಜಿಪಂ, ತಾಪಂ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು…