ಜಮ್ಮು : ರಾಂಬಾನ್‌ನಲ್ಲಿ ಚೆನಾಬ್ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಬಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ಎಲ್ಲಾ ಗೇಟ್‌ಗಳನ್ನು ಸತತ ಎರಡನೇ ದಿನವೂ ಮುಚ್ಚಲಾಗಿದೆ.
ಭಾರತ-ಪಾಕಿಸ್ತಾನ ಯುದ್ದ ನಿಲ್ಲಿಸುವ ಒಪ್ಪಂದ ತಲುಪಿದ್ದರೂ ಭಾರತವು ಸಿಂಧೂ ಜಲ ಒಪ್ಪಂದದ ಬಗ್ಗೆ ತನ್ನ ನಿಲುವನ್ನು ಮುಂದುವರೆಸಿದ್ದು, ನೀರನ್ನು ಸ್ಥಗಿತಗೊಳಿಸಿದೆ. ಪಹಲ್ಗಾಮ್ ದಾಳಿಯ ಬಳಿಕ ಸಿಂಧೂ ನದಿ ಒಪ್ಪಂದವನ್ನು ಸ್ಥಗಿತಗೊಳಿಸಲಾಗಿತ್ತು. ಈ ನಡುವೆ ಮೇ 8 ರಂದು ಬಗ್ಲಿಹಾರ್ ಅಣೆಕಟ್ಟಿನ ಗೇಟ್‌ಗಳನ್ನು ತೆರೆದ ಪರಿಣಾಮ ಪಾಕಿಸ್ತಾನದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿತ್ತು.
ಮೇ 12ರಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡುವಾಗ ಸಿಂಧು ನದಿ ನೀರು ಒಪ್ಪಂದವನ್ನು ಸ್ಥಗಿತಗೊಳಿಸಿದ್ದನ್ನು ಉಲ್ಲೇಖಿಸಿದ್ದ ಪ್ರಧಾನಿ ಮೋದಿ, ನೀರು ಮತ್ತು ರಕ್ತ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ ಎಂದು ಹೇಳಿದ್ದರು.





