ದೇಶ- ವಿದೇಶ

ಜಮ್ಮು ; ಮತ್ತೆ ಬಗ್ಲಿಹಾರ್‌ ಡ್ಯಾಂ ಬಂದ್ ಮಾಡಿದ ಭಾರತ

ಜಮ್ಮು : ರಾಂಬಾನ್‌ನಲ್ಲಿ ಚೆನಾಬ್‌ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಬಗ್ಲಿಹಾರ್‌ ಜಲವಿದ್ಯುತ್‌ ಯೋಜನೆಯ ಅಣೆಕಟ್ಟಿನ ಎಲ್ಲಾ ಗೇಟ್‌ಗಳನ್ನು ಸತತ ಎರಡನೇ ದಿನವೂ ಮುಚ್ಚಲಾಗಿದೆ.

ಭಾರತ-ಪಾಕಿಸ್ತಾನ ಯುದ್ದ ನಿಲ್ಲಿಸುವ ಒಪ್ಪಂದ ತಲುಪಿದ್ದರೂ ಭಾರತವು ಸಿಂಧೂ ಜಲ ಒಪ್ಪಂದದ ಬಗ್ಗೆ ತನ್ನ ನಿಲುವನ್ನು ಮುಂದುವರೆಸಿದ್ದು, ನೀರನ್ನು ಸ್ಥಗಿತಗೊಳಿಸಿದೆ. ಪಹಲ್ಗಾಮ್‌ ದಾಳಿಯ ಬಳಿಕ ಸಿಂಧೂ ನದಿ ಒಪ್ಪಂದವನ್ನು ಸ್ಥಗಿತಗೊಳಿಸಲಾಗಿತ್ತು. ಈ ನಡುವೆ ಮೇ 8 ರಂದು ಬಗ್ಲಿಹಾರ್‌ ಅಣೆಕಟ್ಟಿನ ಗೇಟ್‌ಗಳನ್ನು ತೆರೆದ ಪರಿಣಾಮ ಪಾಕಿಸ್ತಾನದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿತ್ತು.

ಮೇ 12ರಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡುವಾಗ ಸಿಂಧು ನದಿ ನೀರು ಒಪ್ಪಂದವನ್ನು ಸ್ಥಗಿತಗೊಳಿಸಿದ್ದನ್ನು ಉಲ್ಲೇಖಿಸಿದ್ದ ಪ್ರಧಾನಿ ಮೋದಿ, ನೀರು ಮತ್ತು ರಕ್ತ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ ಎಂದು ಹೇಳಿದ್ದರು.

ಆಂದೋಲನ ಡೆಸ್ಕ್

Recent Posts

ಕೆಪಿಎಸ್‌ಸಿ ಮುಚ್ಚುವ ಬಗ್ಗೆ ಚಿಂತನೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…

1 hour ago

ನಂಜನಗೂಡು: ಬೋನಿಗೆ ಬಿದ್ದ ಚಿರತೆ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…

2 hours ago

ವಂದೇ ಮಾತರಂ ಅರ್ಧಕ್ಕೆ ಕಡಿತ: ಆದೇಶ ಮರುಪರಿಶೀಲನೆಗೆ ರಾಜ್ಯಪಾಲರ ಸೂಚನೆ

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…

2 hours ago

ಮದ್ದೂರಿನಲ್ಲಿ ನಿವೃತ್ತ ಹಾಸ್ಟೆಲ್ ಅಧೀಕ್ಷಕನ ಮನೆ ಮೇಲೆ ಲೋಕಾಯುಕ್ತ ದಾಳಿ

ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…

3 hours ago

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

5 hours ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

11 hours ago