ಹೊಸದಿಲ್ಲಿ : ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಸೋಮವಾರ(ಜು.21) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸಂವಿಧಾನದ 67(a) ವಿಧಿಯ ಪ್ರಕಾರ ರಾಜೀನಾಮೆ ನೀಡುತ್ತಿರುವುದಾಗಿ ರಾಜಿನಾಮೆ ಸಲ್ಲಿಸಿದ್ದಾರೆ. ಆರೋಗ್ಯ ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು, ನಾನು ಭಾರತದ ಉಪಾಧ್ಯಕ್ಷ ಸ್ಥಾನಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ರಾಜೀನಾಮೆ ನೀಡುತ್ತಿದ್ದೇನೆʼ ಎಂದು ಅವರು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬರೆದ ಪತ್ರದಲ್ಲಿ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿರುವ ಜಗದೀಪ್ ಧನಕರ್, ರಾಷ್ಟ್ರಪತಿಗಳ ಬೆಂಬಲ ಮತ್ತು ತಮ್ಮ ಅಧಿಕಾರಾವಧಿಯಲ್ಲಿ ಅವರು ಹಂಚಿಕೊಂಡ ಸೌಹಾರ್ದಯುತ ಕಾರ್ಯ ಸಂಬಂಧಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಪ್ರಧಾನಿಯವರ ಸಹಕಾರ ಮತ್ತು ಬೆಂಬಲ ಅಮೂಲ್ಯವಾದುದು. ನನ್ನ ಅಧಿಕಾರದ ಅವಧಿಯಲ್ಲಿ ಬಹಳಷ್ಟು ಕಲಿತಿದ್ದೇನೆ ಎಂದು ಅವರು ಹೇಳಿದ್ದಾರೆ.





