ಲಂಡನ್: ಅಮೆರಿಕ ಮತ್ತು ಭಾರತದ ನಡುವಿನ ಸಂಬಂಧ ಸುಧಾರಿಸುತ್ತಿರುವುದರ ನಡುವೆ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿದ್ದಾರೆ.
ಯುನೈಟೆಡ್ ಕಿಂಗ್ಡಮ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರೊಂದಿಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾರತದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಟ್ರಂಪ್, ಭಾರತ ಹಾಗೂ ಭಾರತದ ಪ್ರಧಾನಿ ಮೋದಿ ನನಗೆ ಬಹಳ ಆಪ್ತ. ಅವರ ಹುಟ್ಟುಹಬ್ಬಕ್ಕೆ ನಾನು ಕರೆ ಮಾಡಿ ವಿಷ್ ಮಾಡಿದ್ದೆ. ನಿನ್ನೆಯಷ್ಟೇ ಅವರ ಜೊತೆ ಮಾತನಾಡಿದ್ದೆ. ನಾವು ಬಹಳ ಒಳ್ಳೆಯ ಒಡನಾಟ ಹೊಂದಿದ್ದೇವೆ. ನಾನು ಭಾರತಕ್ಕೆ ತುಂಬಾ ಹತ್ತಿರವಾಗಿದ್ದೇನೆ, ನಾನು ಭಾರತೀಯ ಪ್ರಧಾನಿಗೆ ತುಂಬಾ ಹತ್ತಿರವಾಗಿದ್ದೇನೆ. ನಾನು ನಿನ್ನೆ ಅವರೊಂದಿಗೆ ಮಾತನಾಡಿದೆ. ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದೆ. ನಮಗೆ ತುಂಬಾ ಉತ್ತಮ ಸಂಬಂಧವಿದೆ ಎಂದು ಹೇಳಿದರು.





