ದೇಶ- ವಿದೇಶ

ಆಪರೇಷನ್‌ ಸಿಂಧೂರ್‌ ವೇಳೆ ಭಾರತದ ಪರಾಕ್ರಮ: ವಾಯುಪಡೆ ಮುಖ್ಯಸ್ಥ ಎ.ಪಿ.ಸಿಂಗ್‌ ಹೇಳಿದ್ದಿಷ್ಟು.!

ನವದೆಹಲಿ: ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಐದು ಯುದ್ಧ ವಿಮಾನ ಹಾಗೂ 1 ಏರ್‌ಕ್ರಾಫ್ಟ್‌ ಹೊಡೆದುರುಳಿಸಿದ್ದೇವೆ ಎಂದು ವಾಯುಪಡೆ ಮುಖ್ಯಸ್ಥ ಏರ್‌ ಚೀಫ್‌ ಮಾರ್ಷಲ್‌ ಎ.ಪಿ.ಸಿಂಗ್‌ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಭಾರತದ ವಾಯು ರಕ್ಷಣಾ ಮೇಲ್ಮೈಯಿಂದ ಆಕಾಶಕ್ಕೆ ಹಾರುವ ಕ್ಷಿಪಣಿ ವ್ಯವಸ್ಥೆಗಳು ಐದು ಪಾಕಿಸ್ತಾನಿ ಯುದ್ಧ ವಿಮಾನಗಳನ್ನು ಮತ್ತು ವಾಯುಗಾಮಿ ಕಣ್ಗಾವಲು, ಮುಂಚಿನ ಎಚ್ಚರಿಕೆಗಾಗಿ ವಿನ್ಯಾಸಗೊಳಿಸಲಾದ ವಿಶೇಷ ಮಿಲಿಟರಿ ವಿಮಾನವಾದ AEW&C/ELINT ವಿಮಾನವನ್ನು ನಾಶಪಡಿಸಿವೆ ಎಂದು ಹೇಳಿದ್ದಾರೆ.

ಜಕೋಬಾದಲ್ಲಿ ನಿಲ್ಲಿಸಲಾಗಿದ್ದ ಕೆಲವು F16 ಜೆಟ್‌ಗಳು ಹಾಗೂ ಭೋಲಾರಿಯಲ್ಲಿ AEW&C ಅನ್ನು ನಾಶಪಡಿಸಲಾಗಿದೆ ಎಂದು ಹೇಳಿದರು.

ಹೆಚ್ಚಿನ ವಿವರಗಳ್ನನು ಬಹಿರಂಗಪಡಿಸಿದ ಐಎಎಫ್‌ ಮುಖ್ಯಸ್ಥರು, ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಭಾರತವು ಮೇ.7ರಂದು ಪ್ರತೀಕಾರ ತೀರಿಸಿಕೊಳ್ಳುವ ಮೊದಲು ಕಟ್ಟಡಗಳನ್ನು ಗುರುತಿಸಲಾಗಿತ್ತು ಎಂದು ಹೇಳಿದರು. ಭಾರತೀಯ ದಾಳಿಯಿಂದ ಉಂಟಾದ ಹಾನಿಯ ನಿಖರತೆಯನ್ನು ಉಪಗ್ರಹ ಚಿತ್ರಗಳ ಮೂಲಕ ಲೆಕ್ಕಹಾಕಲಾಗಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

5 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

6 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

8 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

9 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

10 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

10 hours ago