ನವದೆಹಲಿ: ಭಾರತದಿಂದ ಹೈಪರ್ ಸಾನಿಕ್ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗವನ್ನು ಒಡಿಶಾ ಕರಾವಳಿಯ ಅಬ್ದುಲ್ ಕಲಾಂ ದ್ವೀಪದಿಂದ ಯಶ್ವಸಿಯಾಗಿ ನಿರ್ವಹಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೈಪರ್‌ಸಾನಿಕ್ ಕ್ಷಿಪಣಿಯ ಪರೀಕ್ಷೆಯನ್ನು ಐತಿಹಾಸಿಕವೆಂದು ಬಣ್ಣಿಸಿ ಈ ಅದ್ಭುತ ಸಾಧನೆಗೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಹಾಗು ಸಶಸ್ತ್ರ ಪಡೆಗಳಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು ಎಂದರು.
ಭಾರತ ದೇಶವು ಸುಧಾರಿತ ಮಿಲಿಟರಿ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುವ ಸಾಮರ್ಥ್ಯವನ್ನು ಹೊಂದಿದ್ದು, ಕೆಲವೇ ಕೆಲವು ರಾಷ್ಟ್ರಗಳ ಗುಂಪಿನಲ್ಲಿ ಗುರುತಿಸಿಕೊಳ್ಳಲು ಯಶ್ವಸಿ ಸಾಧನೆಯನ್ನು ಮಾಡಿದೆ ಎಂದು ಸಂತಸ ವ್ಯಕ್ತಪಡಿಸಿದರು.





