ದೇಶ- ವಿದೇಶ

ಭಾರತದ ಯೂರಿಯಾ ಘಟಕಗಳು ಅರ್ಧದಷ್ಟು ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸುತ್ತಿವೆ: ಮೂಲಗಳಿಂದ ಮಾಹಿತಿ

ಹೊಸದಿಲ್ಲಿ: ಭಾರತದ ಯೂರಿಯಾ ಘಟಕಗಳು ಅರ್ಧದಷ್ಟು ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸುತ್ತಿವೆ ಎಂದು ಮೂಲಗಳು ಹೇಳಿವೆ. ಪಶ್ಚಿಮ ಏಷ್ಯಾದಲ್ಲಿನ ಯುದ್ಧವು ಹೊರ್ಮುಜ್‌ ಜಲಸಂಧಿಯಲ್ಲಿ ಸರಕು ಸಾಗಣೆಗೆ ಅಡ್ಡಿ ಸೃಷ್ಟಿಸಿದೆ, ಇದರಿಂದಾಗಿ ಹಲವು ಕಂಪನಿಗಳು ಎಲ್‌ಎನ್‌ಜಿ ಪೂರೈಕೆ ವಿಚಾರದಲ್ಲಿ ಗುತ್ತಿಗೆ ಒಪ್ಪಂದಗಳಿಗೆ ಅನುಗುಣವಾಗಿ ನಡೆದುಕೊಳ್ಳಲು ಆಗದು ಎಂದು ಹೇಳಿವೆ. ಇದು ಎಲ್‌ಎನ್‌ಜಿ ಪೂರೈಕೆ ಮೇಲೆ ಪರಿಣಾಮ ಬೀರಿದೆ.

ಪೆಟ್ರೊನೆಟ್‌ ಎಲ್‌ಎನ್‌ಜಿ ಕಂಪನಿಯು ದೇಶಕ್ಕೆ ಪೂರೈಕೆ ಆಗುವ ಎಲ್‌ಎನ್‌ಜಿ ಸ್ವೀಕರಿಸುವ ಅತಿದೊಡ್ಡ ಟರ್ಮಿನಲ್‌ ನಿರ್ವಹಣೆ ಮಾಡುತ್ತಿದೆ. ಜಲಸಂಧಿಯಲ್ಲಿ ಸೃಷ್ಟಿಯಾಗಿರುವ ಅಡ್ಡಿಯ ಕಾರಣದಿಂದಾಗಿ, ಈ ಕಂಪನಿಗೆ ಎಲ್‌ಎನ್‌ಜಿ ಪೂರೈಕೆ ಮಾಡುವವರು ಪೂರೈಕೆ ಕಷ್ಟ ಎಂದು ಹೇಳಿದ್ದಾರೆ. ಹೀಗಾಗಿ ಪೆಟ್ರೊನೆಟ್‌ ಎಲ್‌ಎನ್‌ಜಿ ಕೂಡ ತನ್ನಿಂದ ಗುತ್ತಿಗೆ ಒಪ್ಪಂದಗಳಿಗೆ ಅನುಗುಣವಾಗಿ ನಡೆದುಕೊಳ್ಳಲು ಆಗದು ಎಂದು ತಿಳಿಸಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

ಇದರಿಂದಾಗಿ ಸರ್ಕಾರಿ ಸ್ವಾಮ್ಯದ ಗೇಲ್‌ ಲಿಮಿಟೆಡ್‌, ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿ‍ಪಿಸಿಎಲ್‌) ಅನಿಲ ಪೂರೈಕೆಯನ್ನು ಕಡಿಮೆ ಮಾಡಿವೆ. ಈ ಕಂ‍ಪನಿಗಳು ದೇಶದಾದ್ಯಂತ ಇರುವ ರಸಗೊಬ್ಬರ ಘಟಕಗಳಿಗೆ ಅನಿಲ ಸರಬರಾಜು ಮಾಡುತ್ತವೆ.‘ಪರಿಸ್ಥಿತಿ ಸಹಜವಾಗಿದ್ದ ಮಟ್ಟಕ್ಕೆ ಹೋಲಿಸಿದರೆ ಈಗ ಅನಿಲ ಪೂರೈಕೆಯು ಶೇ 60ರಿಂದ ಶೇ.65ರಷ್ಟು ಮಾತ್ರ ಇದೆ’ ಎಂದು ಉದ್ಯಮದ ಮೂಲಗಳು ಹೇಳಿವೆ. ಇದರಿಂದಾಗಿ ಯೂರಿಯಾ ಉತ್ಪಾದನೆಯು ಘಟಕಗಳಲ್ಲಿ ಸರಿಸುಮಾರು ಶೇ.50ರಷ್ಟು ಕಡಿಮೆ ಆಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

5 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

6 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

6 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

7 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

7 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

13 hours ago