ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ ಅಮಾನತ್ತುಗೊಳಿಸಿದೆ.
ನೂರಾರು ಇಂಡಿಗೊ ವಿಮಾನ ರದ್ದಾಗಿದ್ದರಿಂದ ಲಕ್ಷಾಂತರ ಮಂದಿ ಪ್ರಯಾಣಿಕರು ತೊಂದರೆ ಅನುಭವಿಸಿದ್ದರು. ಎಫ್‌ಒಐಗಳು ನಾಗರಿಕ ವಿಮಾನಯಾನ ನಿರ್ದೇಶನಾಲಯಲ್ಲಿ ಕೆಲಸ ಮಾಡುವ ಹಿರಿಯ ಅಧಿಕಾರಿಗಳಾಗಿದ್ದು, ಅದರ ನಿಯಂತ್ರಕ ಮತ್ತು ಸುರಕ್ಷತಾ ಮೇಲ್ವಿಚಾರಣಾ ಕಾರ್ಯಗಳ ಭಾಗವಾಗಿ ಕೆಲಸ ಮಾಡುತ್ತಾರೆ. ಆಗಾಗ್ಗೆ ವಿಮಾನಯಾನ ಕಾರ್ಯಾಚರಣೆಗಳನ್ನು ಮೇಲ್ವಿಚಾರಣೆ ಮಾಡಲು ನಿಯೋಜಿಸಲಾಗುತ್ತದೆ. ಭಾರಿ ಪ್ರಮಾಣದಲ್ಲಿ ನಡೆದ ಇಂಡಿಗೊ ವಿಮಾನ ಕಾರ್ಯಾಚರಣೆಯಲ್ಲಿ ವ್ಯತ್ಯಯ ಪ್ರಕರಣದಲ್ಲಿ ಡಿಜಿಸಿಎಯಲ್ಲಿರುವ ೪ ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು ಅಮಾನತ್ತು ಮಾಡಲಾಗಿದೆ ಎಂದು ಮೂಲವೊಂದು ತಿಳಿಸಿದೆ.





