ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ.
ಬೆಂಗಳೂರಿನಲ್ಲಿ ಇಂದು 127 ಸೇರಿದಂತೆ ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ.
ಭಾರತ ಹಿಂದೆಂದೂ ಕಂಡು ಕೇಳರಿಯದ ಪ್ರಮಾಣದಲ್ಲಿ ವಿಮಾನಗಳ ಹಾರಾಟದ ಬಿಕ್ಕಟ್ಟು ಸತತ ಏಳನೇ ದಿನಕ್ಕೆ ಕಾಲಿಟ್ಟಿದೆ.
ಇದನ್ನು ಓದಿ: ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ: ಬಸ್ ಟಿಕೆಟ್ ದರ ದುಪ್ಪಟ್ಟು ಏರಿಕೆ
ದೆಹಲಿ ವಿಮಾನ ನಿಲ್ದಾಣದಲ್ಲಿ ನಿರ್ಗಮನ ಹಾಗೂ ಆಗಮನ ಸೇರಿ ಒಟ್ಟು 134 ವಿಮಾನಗಳು, ಬೆಂಗಳೂರಿನಲ್ಲಿ 127, ಚೆನ್ನೈನಲ್ಲಿ 71, ಹೈದರಾಬಾದ್‌ನಲ್ಲಿ 77, ಜಮ್ಮುವಿನಲ್ಲಿ 20, ಅಹಮದಾಬಾದ್‌ನಲ್ಲಿ 20 ಹಾಗೂ ವೈಜಾಗ್‌ನಲ್ಲಿ 7, ಮುಂಬೈ, ಕೋಲ್ಕತ್ತಾ ಸೇರಿದಂತೆ ಇತರ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ.
ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿರುವ ಹಿನ್ನೆಲೆಯಲ್ಲಿ ವಿಮಾನ ಟಿಕೆಟ್ ದರ ಹೆಚ್ಚಾಗಿದೆ. ಹೀಗಾಗಿ ಅನಿವಾರ್ಯವಾಗಿ ಏರ್ ಆಂಬುಲೆನ್ಸ್‌ಗಳ ದರವೂ ಏರಿಕೆಯಾಗಿದೆ. ಇದರ ಮೂಲಕ ರೋಗಿಗಳನ್ನು ಶಿಫ್ಟ್ ಮಾಡಲು ಸಮಸ್ಯೆಯಾಗುತ್ತಿದೆ.





