ದೇಶ- ವಿದೇಶ

ಮುಂದುವರಿದ ಇಂಡಿಗೋ ಸಮಸ್ಯೆ: ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳು ರದ್ದು

ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ.

ಬೆಂಗಳೂರಿನಲ್ಲಿ ಇಂದು 127 ಸೇರಿದಂತೆ ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ.

ಭಾರತ ಹಿಂದೆಂದೂ ಕಂಡು ಕೇಳರಿಯದ ಪ್ರಮಾಣದಲ್ಲಿ ವಿಮಾನಗಳ ಹಾರಾಟದ ಬಿಕ್ಕಟ್ಟು ಸತತ ಏಳನೇ ದಿನಕ್ಕೆ ಕಾಲಿಟ್ಟಿದೆ.

ಇದನ್ನು ಓದಿ: ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ: ಬಸ್ ಟಿಕೆಟ್‌ ದರ ದುಪ್ಪಟ್ಟು ಏರಿಕೆ

ದೆಹಲಿ ವಿಮಾನ ನಿಲ್ದಾಣದಲ್ಲಿ ನಿರ್ಗಮನ ಹಾಗೂ ಆಗಮನ ಸೇರಿ ಒಟ್ಟು 134 ವಿಮಾನಗಳು, ಬೆಂಗಳೂರಿನಲ್ಲಿ 127, ಚೆನ್ನೈನಲ್ಲಿ 71, ಹೈದರಾಬಾದ್‌ನಲ್ಲಿ 77, ಜಮ್ಮುವಿನಲ್ಲಿ 20, ಅಹಮದಾಬಾದ್‌ನಲ್ಲಿ 20 ಹಾಗೂ ವೈಜಾಗ್‌ನಲ್ಲಿ 7, ಮುಂಬೈ, ಕೋಲ್ಕತ್ತಾ ಸೇರಿದಂತೆ ಇತರ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ.

ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿರುವ ಹಿನ್ನೆಲೆಯಲ್ಲಿ ವಿಮಾನ ಟಿಕೆಟ್‌ ದರ ಹೆಚ್ಚಾಗಿದೆ. ಹೀಗಾಗಿ ಅನಿವಾರ್ಯವಾಗಿ ಏರ್‌ ಆಂಬುಲೆನ್ಸ್‌ಗಳ ದರವೂ ಏರಿಕೆಯಾಗಿದೆ. ಇದರ ಮೂಲಕ ರೋಗಿಗಳನ್ನು ಶಿಫ್ಟ್‌ ಮಾಡಲು ಸಮಸ್ಯೆಯಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

20 mins ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

33 mins ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

39 mins ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

55 mins ago

ಎಲ್‌ಪಿಜಿ ಗ್ರಾಹಕರಿಗೆ ಬಯೋಮೆಟ್ರಿಕ್ ದೃಢಿಕರಣ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ

ಹೊಸದಿಲ್ಲಿ : ಹಾರ್ಮುಜ್ ಜಲಸಂಧಿ ಸಂಘರ್ಷದಿಂದ ಉಂಟಾದ ಅಡುಗೆ ಅನಿಲ (ಎಲ್‌ಪಿಜಿ) ಸರಬರಾಜು ಕೊರತೆಯ ನಡುವೆ ಕೇಂದ್ರ ಪೆಟ್ರೋಲಿಯಂ ಮತ್ತು…

1 hour ago

ಜಾಹೀರಾತು ಫಲಕಗಳಲ್ಲಿ ಪ್ಲಾಸ್ಟಿಕ್ ನಿಷೇಧ : ಬೈರತಿ ಸುರೇಶ್

• ಅನಧಿಕೃತ ಜಾಹೀರಾತು ಹಾಕಿದರೆ ಕ್ರಿಮಿನಲ್ ಕೇಸ್ • ವಿಧಾನಸಭೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಾಹೀರಾತು ನೀತಿ ಮಸೂದೆ ಮಂಡನೆ,…

2 hours ago