ಜಮ್ಮು-ಕಾಶ್ಮೀರ: ಇಲ್ಲಿನ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಿಂದ 26 ಮಂದಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನದ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ.
ಕೇಂದ್ರ ಸರ್ಕಾರವು ಸಿಂಧೂ ನದಿ ಒಪ್ಪಂದವನ್ನು ರದ್ದುಗೊಳಿಸಲು ನಿರ್ಧಾರ ಮಾಡಿದ್ದು, ಈ ತೀರ್ಮಾನಕ್ಕೆ ಜಮ್ಮು-ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ ಸ್ವಾಗತಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ಕೇಂದ್ರ ಸರ್ಕಾರ ಸಿಂಧೂ ಜಲ ಒಪ್ಪಂದ ರದ್ದುಗೊಳಿಸಿರುವುದನ್ನು ಸ್ವಾಗತಿಸುತ್ತೇನೆ. ಈಗಾಗಲೇ ಸಿಂಧೂ ಜಲ ಒಪ್ಪಂದದಿಂದ ಕಾಶ್ಮೀರಕ್ಕೆ ಸಾಕಷ್ಟು ನಷ್ಟವಾಗಿದೆ. ಆದರೆ ಈ ಒಪ್ಪಂದವನ್ನು ಅಮಾನತುಗೊಳಿಸುವುದರಿಂದ ಜಮ್ಮು-ಕಾಶ್ಮೀರದ ಪ್ರಯೋಜನವಾದರೆ ಅದು ಒಳ್ಳೆಯ ಬೆಳವಣಿಗೆ ಎಂದಿದ್ದಾರೆ.
ಈ ಮೂಲಕ ಜಮ್ಮು-ಕಾಶ್ಮೀರದ ಸಿಎಂ ಓಮರ್ ಅಬ್ದುಲ್ಲಾ ಅವರು, ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತ ಮಾಡಿದ್ದು, ಪಾಕಿಸ್ತಾನದ ವಿರುದ್ಧ ಹೋರಾಟ ಮಾಡಲು ಮುಂದಾಗಿದ್ದಾರೆ.





