ದೇಶ- ವಿದೇಶ

ಮೈಸೂರು ಸೇರಿದಂತೆ 9 ಜಿಲ್ಲೆಗೆ ಕೈಗಾರಿಕಾ ಕಾರಿಡಾರ್‌ : ಗೋಯಲ್‌ ಜೊತೆ ಎಚ್‌ಡಿಕೆ ಮಾತುಕತೆ

ಹೊಸದಿಲ್ಲಿ : ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವ ಪಿಯೂಶ್‌ ಗೋಯಲ್‌ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿದರು.

ದಿಲ್ಲಿಯ ಗುರುವಾರ ವಾಣಿಜ್ಯ ಸಚಿವಾಲಯದ ಕಚೇರಿಗೆ ತೆರಳಿ ಸಚಿವ ಗೋಯಲ್‌ ಅವರನ್ನು ಭೇಟಿಯಾದ ಕುಮಾರಸ್ವಾಮಿ ಅವರು; ಈ ಯೋಜನೆ ಕುರಿತ ಮನವಿಯನ್ನು ಸಲ್ಲಿಸಿ ರಾಜ್ಯದ ಕೈಗಾರಿಕಾಭಿವೃದ್ಧಿ ಬಗ್ಗೆ ವಿವಿಧ ಆಯಾಮಗಳಲ್ಲಿ ಚರ್ಚೆ ನಡೆಸಿದರು.

ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಹಾಸನ, ಮಂಗಳೂರು, ಹುಬ್ಬಳ್ಳಿ-ಧಾರವಾಡ, ರಾಯಚೂರು ಮತ್ತು ಬೀದರ್ ಜಿಲ್ಲೆಗಳನ್ನು ಒಳಗೊಂಡ ಸುವಿಶಾಲವಾದ, ಬಹುವ್ಯಾಪ್ತಿಯುಳ್ಳ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP) ಅನುಷ್ಠಾನ ಮಾಡಬೇಕೆಂದು ಕೋರಿ ಗೋಯಲ್‌ ಅವರನ್ನು ಕೋರಲಾಯಿತು. ಕೈಗಾರಿಕೆ ಕ್ಷೇತ್ರದಲ್ಲಿ ಮುಂಚೂಣಿ ರಾಜ್ಯವಾಗಿರುವ ಕರ್ನಾಟಕದಾದ್ಯಂತ ಸೂಕ್ತ ಕೈಗಾರಿಕಾ ಕಾರಿಡಾರ್ ಯೋಜನೆಯ ಚೌಕಟ್ಟಿನಡಿಯಲ್ಲಿ ಕೈಗಾರಿಕಾ ಪಾರ್ಕುಗಳನ್ನು ಸ್ಥಾಪಿಸುವ ಕುರಿತಂತೆ ಸಚಿವರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಲಾಯಿತು ಎಂದು ಸಚಿವ ಕುಮಾರಸ್ವಾಮಿ ಅವರು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪದಂತೆ ಪ್ರಾದೇಶಿಕ ಕೈಗಾರಿಕಾ ಬೆಳವಣಿಗೆಯನ್ನು ಬಲಪಡಿಸಿ ಉತ್ತೇಜಿಸಲು, ಸಾಗಾಣಿಕೆಯ ಮೂಲಸೌಕರ್ಯವನ್ನು ಅಧಿಕವಾಗಿ ಅಭಿವೃದ್ಧಿಪಡಿಸಲು ಹಾಗೂ ಕರ್ನಾಟಕದ ಉದ್ದಗಲಕ್ಕೂ ಬೃಹತ್ ಪ್ರಮಾಣದಲ್ಲಿ ಉದ್ಯೋಗಾವಕಾಶ ಸೃಷ್ಟಿಸಲು ಈ ಯೋಜನೆಯು ಬಹುದೊಡ್ಡ ಮಟ್ಟದಲ್ಲಿ ಕೊಡುಗೆ ನೀಡುತ್ತದೆ ಎಂಬ ಅಂಶವನ್ನು ಸಚಿವ ಗೋಯಲ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು. ನನ್ನ ಪ್ರಸ್ತಾವನೆಗೆ ಅವರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದರು. ರಾಜ್ಯದ ಕೈಗಾರಿಕಾಭಿವೃದ್ಧಿಗೆ ಕೈಜೋಡಿಸುವುದಾಗಿ ಭರವಸೆ ನೀಡಿದರು ಎಂದು ಕುಮಾರಸ್ವಾಮಿ ಅವರು ಮಾಹಿತಿ ನೀಡಿದರು.

ಇದನ್ನೂ ಓದಿ:-ಬೆಳಗಾವಿಯಲ್ಲಿ ಡಿ.8 ರಿಂದ ಚಳಿಗಾಲ ಅಧಿವೇಶನ

ಈ ಯೋಜನೆ ಅನುಷ್ಠಾನಕ್ಕೆ ಬಂದರೆ ಸಾಗಾಣಿಕೆ ಸುಲಭವಾಗಿ ಕೈಗಾರಿಕಾಭಿವೃದ್ಧಿ ವೇಗಗತಿಯಲ್ಲಿ ಸಾಗುತ್ತದೆ. ಉದ್ದೇಶಿತ ಜಿಲ್ಲೆಗಳಲ್ಲಿ ಯೋಜನೆ ಬಂದರೆ ಇಡೀ ರಾಜ್ಯಕ್ಕೆ ಸಮಗ್ರವಾಗಿ ಅನುಕೂಲ ಆಗುತ್ತದೆ. ಮುಖ್ಯವಾಗಿ ಈ ಪ್ರದೇಶಗಳು ಸಾಮೂಹಿಕವಾಗಿ ದೊಡ್ಡ ಮಟ್ಟದಲ್ಲಿ ಕೈಗಾರಿಕಾ ಅಭಿವೃದ್ಧಿ ಕಾಣುವುದಲ್ಲದೆ, ಸಮತೋಲಿತ ಪ್ರಾದೇಶಿಕ ಬೆಳವಣಿಗೆಗೆ ಕಾಣಿಕೆ ನೀಡುತ್ತವೆ ಕುಮಾರಸ್ವಾಮಿ ಚರ್ಚೆಯ ವೇಳೆ ಒತ್ತಿ ಹೇಳಿದರು.

ಈ ಪ್ರಸ್ತಾವಿತ ಕೈಗಾರಿಕಾ ಪಾರ್ಕುಗಳನ್ನು ಸೂಕ್ತವಾದ ಕೈಗಾರಿಕಾ ಕಾರಿಡಾರ್ ಇಲ್ಲವೇ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP) ಚೌಕಟ್ಟಿನ ಅಡಿಯಲ್ಲಿ ಪರಿಗಣಿಸಬೇಕೆಂದು ವಿನಂತಿಸಿದ ಕುಮಾರಸ್ವಾಮಿ ಅವರು; ಈ ಜಿಲ್ಲೆಗಳನ್ನು ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್‌ಗಳಿಗೆ ಸಂಯೋಜಿಸುವ ಮೂಲಕ ಕರ್ನಾಟಕವು ಉದ್ಯೋಗ ಸೃಷ್ಟಿಯಲ್ಲಿ ನಿರ್ಣಾಯಕ ಪಾತ್ರ ವಹಿಸಲು ಅನುಕೂಲವಾಗುತ್ತದೆ. ಅಲ್ಲದೆ, ಸಾಕಾಣಿಗೆ ಸುಲಭವಾಗಿ ಖಾಸಗಿ ಬಂಡವಾಳ ಹೂಡಿಕೆಯಲ್ಲೂ ಗಮನಾರ್ಹ ಪ್ರಗತಿ ಸಾಧಿಸಲಿದೆ ಎಂದು ಉಕ್ಕು ಸಚಿವರು ಗೋಯಲ್‌ ಅವರಿಗೆ ವಿವರಿಸಿದರು.

ಸಚಿವರಿಂದ ಸಕಾರಾತ್ಮಕ ಪ್ರತಿಕ್ರಿಯೆ
ಸಚಿವ ಗೋಯಲ್‌ ಅವರೊಂದಿಗೆ ಚರ್ಚೆ ಬಗ್ಗೆ ಸಂತಸ ವ್ಯಕ್ತಪಡಸಿದ ಕುಮಾರಸ್ವಾಮಿ ಅವರು; ವಾಣಿಜ್ಯ ಮತ್ತು ಕೈಗಾರಿಕೆ ಸಚಿವರು ಈ ಪ್ರಸ್ತಾವನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದರಲ್ಲದೆ, ಯೋಜನೆಯ ಅನುಷ್ಠಾನದ ಬಗ್ಗೆ ಆಸಕ್ತಿ ವ್ಯಕ್ತಪಡಿಸಿದರು. ಅಲ್ಲದೆ; ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಉತ್ಪಾದನೆ ಮತ್ತು ಕೈಗಾರಿಕಾ ಸ್ಪರ್ಧಾತ್ಮಕತೆಯನ್ನು ಬಲಪಡಿಸುವ ಕೇಂದ್ರ ಸರ್ಕಾರದ ವಿಶಾಲ ದೃಷ್ಟಿಕೋನಕ್ಕೆ ಅನುಗುಣವಾಗಿ ಈ ಉಪಕ್ರಮವನ್ನು ದೊಡ್ಡ ಪ್ರಮಾಣದಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈ ಯೋಜನೆಯಿಂದ ರಾಜ್ಯದ ಉತ್ತರ, ಮಧ್ಯ ಮತ್ತು ದಕ್ಷಿಣ ಪ್ರದೇಶಗಳಲ್ಲಿ ಕೈಗಾರಿಕಾ ವಿಸ್ತರಣೆಗೆ ಒತ್ತು ನೀಡುವಲ್ಲಿ ಪ್ರಮುಖ ಹೆಜ್ಜೆಯಾಗಿದೆ ಎಂಬುದಾಗಿ ಕುಮಾರಸ್ವಾಮಿ ತಿಳಿಸಿದರು.

ಸಮತೋಲಿತ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿ
ಪ್ರಸ್ತಾವಿತ ಕೈಗಾರಿಕಾ ಪಾರ್ಕುಗಳು ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಸುವ, ಪ್ರಾದೇಶಿಕ ಪೂರೈಕೆ ಸರಪಳಿಯ ಸಂಪರ್ಕಗಳನ್ನು ಮತ್ತಷ್ಟು ಬಲಪಡಿಸುವ ಹಾಗೂ ಹುಬ್ಬಳ್ಳಿ-ಧಾರವಾಡ ಮತ್ತು ಮಂಗಳೂರಿನಲ್ಲಿ ಸಾಗಣೆ ಮತ್ತು ಉತ್ಪಾದನೆಯಿಂದ ಮೊದಲುಗೊಂಡು ರಾಯಚೂರಿನಲ್ಲಿ ಕೃಷಿ ಸಂಸ್ಕರಣೆ, ಮೈಸೂರು ಮತ್ತು ಕೋಲಾರದಲ್ಲಿ ಮೌಲ್ಯವರ್ಧಿತ ವಲಯಗಳ ವಿಸ್ತರಣೆವರೆಗೆ ವಿಶೇಷ ಕೈಗಾರಿಕಾ ಸಮೂಹಗಳನ್ನು ಉತ್ತೇಜಿಸುತ್ತವೆ ಎಂದು ಸಚಿವ ಕುಮಾರಸ್ವಾಮಿ ವಿವರಿಸಿದರು.

ಆಂದೋಲನ ಡೆಸ್ಕ್

Recent Posts

2028ಕ್ಕೂ ಡಿಕೆಶಿ ಸಿಎಂ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ: ಸತೀಶ್ ಜಾರಕಿಹೊಳಿ

ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…

3 hours ago

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

9 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

9 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

9 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

9 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

9 hours ago