ಗುವಾಹಟಿ: ಅಸ್ಸಾಂನ ನಗಾಂವ್ ಜಿಲ್ಲೆಯಲ್ಲಿ ಮಾನವ-ಆನೆಗಳ ನಡುವಿನ ಸಂಘರ್ಷ ತಡೆಗಟ್ಟಲು ಅಲ್ಲಿನ ಜನರು ʼಆನೆಗಳ ಸ್ನೇಹಿತರುʼ (ಹಾಥಿ ಬಂಧು) ಎಂಬ ಹೆಸರಿನಲ್ಲಿ ವಿನೂತನ ದಾರಿ ಕಂಡುಕೊಂಡಿರುವುದನ್ನು ʼಮನದ ಮಾತುʼ ತಿಂಗಳ ರೇಡಿಯೊ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದರು.
ವಿವಿಧ ಹುಲ್ಲನ್ನು ಬೆಳೆದು ಆನೆಗಳ ಹಾವಳಿ ತಪ್ಪಿಸುವ ಈ ವಿನೂತನ ಕಾರ್ಯದ ಆಡಿಯೊ ಕ್ಲಿಪ್ ಅನ್ನು ʼಎಕ್ಸ್ʼ ನಲ್ಲಿ ಹಂಚಿಕೊಂಡಿರುವ ಮೋದಿ ಅವರು, ನಗಾಂವ್ ಜಿಲ್ಲೆಯ ಪ್ರಯತ್ನವು ಪ್ರತಿಯೊಬ್ಬರನ್ನೂ ಪ್ರೇರೇಪಿಸುವ ಶಕ್ತಿ ಹೊಂದಿದೆ ಎಂದು ಹೇಳಿದ್ದಾರೆ.
ನಗಾಂವ್ ಜಿಲ್ಲೆಯಲ್ಲಿ ನಿರಂತರವಾಗಿ ಮಾನವ-ಆನೆ ಸಂಘರ್ಷ ನಡೆಯುತ್ತಿತ್ತು. ಇದರಿಂದ ಕಂಗಲಾಗಿದ್ದ ಗ್ರಾಮಸ್ಥರು ʼಹಾಥಿ ಬಂಧುʼ ಹೆಸರಿನಲ್ಲಿ ವಿನೂತನ ಹೆಜ್ಜೆ ಇಟ್ಟಿದ್ದಾರೆ. ಗ್ರಾಮಸ್ಥರೆಲ್ಲ ಒಗ್ಗೂಡಿ 264 ಎಕರೆ ಬರಡು ಭೂಮಿಯಲ್ಲಿ ಮೇವಿನ ಹುಲ್ಲು (ನೇಪಿಯರ್ ಹುಲ್ಲು) ಬೆಳೆಯುವ ಮೂಲಕ ಆಹಾರ ಅರಸಿ ಗ್ರಾಮಗಳಿಗೆ ಬರುತ್ತಿದ್ದ ಆನೆಗಳಿಗೆ ಕಡಿವಾಣ ಹಾಕಿದ್ದಾರೆ.
ಇದರಿಂದ ಕೃಷಿ ಭೂಮಿಗೆ ಆನೆಗಳು ಲಗ್ಗೆ ಇಡುವುದು ಕಡಿಮೆ ಆಗಿದ್ದು, ಜನರು ನಿಟ್ಟುಸಿರು ಬಿಡುವಂತಾಗಿದೆ ಎಂದು ತಿಳಿಸಿದ್ದಾರೆ.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…