ದೇಶ- ವಿದೇಶ

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್ ಭೂಯಾನ್, ಕೇಂದ್ರ ಸರ್ಕಾರದ ಸಲಹೆಯಂತೆ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಅತುಲ್ ಶ್ರೀಧರನ್ ಅವರನ್ನು ಅಲಹಾಬಾದ್ ಉಚ್ಚ ನ್ಯಾಯಾಲಯಕ್ಕೆ ವರ್ಗಾಯಿಸಿರುವ ಕ್ರಮವನ್ನು ಬಹಿರಂಗವಾಗಿ ಟೀಕಿಸಿದ್ದಾರೆ.

ಕೊಲಿಜಿಯಂ ವ್ಯವಸ್ಥೆಯ ಮೇಲೆ ಇದು ಕಾರ್ಯಾಂಗದ ಒತ್ತಡಕ್ಕೆ ಬಹಿರಂಗ ನಿದರ್ಶನವಾಗಿದ್ದು, ದುರದೃಷ್ಟಕರ ಬೆಳವಣಿಗೆ ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನ್ಯಾಯಮೂರ್ತಿ ಶ್ರೀಧರನ್ ಅವರ ಹೆಸರನ್ನು ನೇರವಾಗಿ ಉಲ್ಲೇಖಿಸದೆ, ಸರ್ಕಾರಕ್ಕೆ ಅನನುಕೂಲವೆನಿಸುವ ಆದೇಶ ನೀಡಿದ ಕಾರಣಕ್ಕೆ ಒಬ್ಬ ನ್ಯಾಯಮೂರ್ತಿಯನ್ನು ಒಂದು ಉಚ್ಚ ನ್ಯಾಯಾಲಯದಿಂದ ಮತ್ತೊಂದು ಉಚ್ಚ ನ್ಯಾಯಾಲಯಕ್ಕೆ ವರ್ಗಾಯಿಸುವ ಅಗತ್ಯವೇನಿದೆ ಎಂದು ಪ್ರಶ್ನಿಸಿದ್ದಾರೆ.

ನಿರ್ದಿಷ್ಟ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳನ್ನು ಮತ್ತೊಂದು ಉಚ್ಚ ನ್ಯಾಯಾಲಯಕ್ಕೆ ವರ್ಗಾಯಿಸುವ ಸಂಬಂಧ ತಾನೇ ನೀಡಿದ್ದ ಶಿಫಾರಸನ್ನು, ಕೇಂದ್ರ ಸರ್ಕಾರದ ಕೋರಿಕೆಯ ಮೇರೆಗೆ ಸರ್ವೋಚ್ಚ ನ್ಯಾಯಾಲಯದ ಕೊಲಿಜಿಯಂ ಬದಲಾಯಿಸಿರುವುದು, ಕೊಲಿಜಿಯಂ ವ್ಯವಸ್ಥೆಯ ಸಮಗ್ರತೆಯ ವಿಷಯದಲ್ಲಿ ಮಾಡಿಕೊಂಡ ರಾಜಿಯಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ನ್ಯಾಯಮೂರ್ತಿ ಶ್ರೀಧರನ್ ಅವರನ್ನು ಮಧ್ಯಪ್ರದೇಶ ಉಚ್ಚ ನ್ಯಾಯಾಲಯದಿಂದ ಛತ್ತೀಸ್‌ಗಢ ಉಚ್ಚ ನ್ಯಾಯಾಲಯಕ್ಕೆ ವರ್ಗಾಯಿಸಲು ಸರ್ವೋಚ್ಚ ನ್ಯಾಯಾಲಯದ ಕೊಲಿಜಿಯಂ ಕಳೆದ ಆಗಸ್ಟ್‌ನಲ್ಲಿ ಶಿಫಾರಸು ಮಾಡಿತ್ತು. ಆದರೆ ಕೇಂದ್ರ ಸರ್ಕಾರದ ಮನವಿಯ ಮೇರೆಗೆ ಕೊಲಿಜಿಯಂ ತನ್ನ ನಿರ್ಧಾರವನ್ನು ಬದಲಿಸಿ, ಅವರನ್ನು ಅಕ್ಟೋಬರ್‌ನಲ್ಲಿ ವರ್ಗಾಯಿಸಿತು.

ನ್ಯಾಯಮೂರ್ತಿ ಶ್ರೀಧರನ್ ನೇತೃತ್ವದ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ಪೀಠವು ಅಲ್ಲಿನ ಸರ್ಕಾರಕ್ಕೆ ಅನನುಕೂಲವಾಗುವ ಆದೇಶ ನೀಡಿದ್ದ ಹಿನ್ನೆಲೆಯಲ್ಲಿ, ದಂಡನಾತ್ಮಕ ಕ್ರಮವಾಗಿ ಅವರನ್ನು ವರ್ಗಾಯಿಸಲಾಗಿದೆ ಎಂದು ಹಲವಾರು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದರು.

ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಕೀಳುಹಾಸ್ಯದ ಭಾಷೆ ಬಳಸಿದ ಆರೋಪದ ಸಂಬಂಧ ಬಿಜೆಪಿ ಸಚಿವ ವಿಜಯ್ ಶಾ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ ಎಂಬ ಆರೋಪವೂ ಕೇಳಿಬಂದಿತ್ತು.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

10 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

10 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

12 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

14 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

17 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

17 hours ago