Mysore
29
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ: ಗಣ್ಯರಿಂದ ಶುಭಾಶಯ

ನವದೆಹಲಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಹಾಗೂ ಲೋಕಸಏ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಶುಭಾಶಯ ಕೋರಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಇಂದು ನಾವೆಲ್ಲರು ಮಹಿಳೆಯರ ಸಾಧನೆ, ದೇಶಕ್ಕೆ, ಜಗತ್ತಿಗೆ ಮಹಿಳೆಯರ ಕೊಡುಗೆಗಳೇನು ಎಂಬುದನ್ನು ಕೊಂಡಾಡುತ್ತೇವೆ. ಅಲ್ಲದೇ ಮಹಿಳಾ ಹಕ್ಕುಗಳು, ಸಮಾನತೆ ಹಾಗೂ ಸಬಲೀಕರಣದ ಉದ್ದೇಶಗಳನ್ನು ಬಲಪಡಿಸಬೇಕೆಂದು ನಾವೆಲ್ಲರು ಸಂಕಲ್ಪ ಮಾಡಿಕೊಳ್ಳುತ್ತೇವೆ ಎಂದಿದ್ದಾರೆ.

ಇಂದಿನ ದಿನಗಳಲ್ಲಿ ಮಹಿಳೆಯರು ತಮ್ಮ ಚೌಕಟ್ಟಿನ ಗಡಿಯನ್ನು ದಾಡಿ ಮುನ್ನೆಲೆಗೆ ಬರುತ್ತಿದ್ದಾರೆ. ಈ ಮಹಿಳಾ ದಿನದಂದು ಎಲ್ಲರೂ ಒಗ್ಗಟ್ಟಾಗಿ ಮುನ್ನಡೆಯುತ್ತೇವೆ ಎಂದು ಪ್ರತಿಜ್ಞೆ ಮಾಡೋಣ. ಯಾವುದೇ ಹಿಂಜರಿಕೆಯಿಲ್ಲದೆ ಲಿಂಗ ಸಮಾನ ಜಗತ್ತನ್ನು ಕಟ್ಟೋಣ ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ

ಅಂತಾರಾಷ್ಟ್ರೀಯ ದಿನಾಚರಣೆ ಅಂಗವಾಗಿ ತಮ್ಮ ಎಕ್ಸ್‌ ಪೋಸ್ಟ್‌ ಮಾಡಿರುವ ನರೇಂದ್ರ ಮೋದಿ ಅವರು, ಮಹಿಳಾ ದಿನದಂದು ನಾರಿ ಶಕ್ತಿಗೆ ನನ್ನ ನಮನಗಳು. ನಮ್ಮ ಸರ್ಕಾರ ಯಾವಾಗಲೂ ಮಹಿಳೆಯರ ಸಬಲೀಕರಣಕ್ಕಾಗಿ ಕೆಲಸ ಮಾಡಿದ್ದು, ಇದರ ಪ್ರತಿಫಲ ನಮ್ಮ ಯೋಜನೆಗಳು ಹಾಗೂ ಕಾರ್ಯಕ್ರಮಗಳಲ್ಲಿ ಎದ್ದು ಕಾಣಿಸುತ್ತದೆ. ಅಲ್ಲದೇ ಮನ್‌ ಕಿ ಬಾತ್‌ನಲ್ಲಿ ಭರವಸೆ ನೀಡಿದ ಹಾಗೇ ಇಂದು ನನ್ನ ಸಾಮಾಜಿಕ ಮಾಧ್ಯಮ ಖಾತೆಗಳನ್ನು ವಿವಿಧ ಕ್ಷೇತ್ರಗಳಲ್ಲಿ ಛಾಪು ಮೂಡಿಸುತ್ತಿರುವ ಮಹಿಳೆಯರಿಗೆ ಹಸ್ತಾಂತರಿಸಿದ್ದೇನೆ ಎಂದು ಹೇಳಿದ್ದಾರೆ.

ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ

ಈ ಕುರಿತು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಪೋಸ್ಟ್‌ ಮಾಡಿರುವ ಅವರು, ಮಹಿಳೆಯರು ನಮ್ಮ ಸಮಾಜದ ಬೆನ್ನೆಲುಬು. ಅವರ ಶಕ್ತಿ, ಧ್ವನಿ ನಮ್ಮ ದೇಶದ ಭವಿಷ್ಯವನ್ನು ರೂಪಿಸುತ್ತದೆ. ಈ ಅಂತಾರಾಷ್ಟ್ರೀಯ ಮಹಿಳಾ ದಿನದಂದು, ನಾನು ನಿಮ್ಮೊಂದಿಗೆ ಹಾಗೂ ನಿಮ್ಮ ಪರವಾಗಿ ನಿಲ್ಲುತ್ತೇನೆ. ಪ್ರತಿಯೊಬ್ಬ ಮಹಿಳೆ ತನ್ನ ಹಣೆಬರಹವನ್ನು ಸ್ವತಃ ರೂಪಿಸಿಕೊಳ್ಳಲು, ಕನಸುಗಳ ಬೆನ್ನಟ್ಟಲು ಉನ್ನತ ಸ್ಥಾನಕ್ಕೇರಿ, ಸ್ವತಂತ್ರಳಾಗುವವರೆಗೂ ಅವರ ಎಲ್ಲಾ ಏಳು-ಬೀಳುಗಳಲ್ಲಿ ನಾವು ಜೊತೆಯಾಗಿರುತ್ತೇವೆ ಎಂದು ಶುಭಾಶಯ ಕೋರಿದ್ದಾರೆ.

Tags:
error: Content is protected !!