ದೇಶ- ವಿದೇಶ

ಇರಾನ್-ಇಸ್ರೇಲ್‌ ನಡುವೆ ತೀವ್ರಗೊಂಡ ಸಂಘರ್ಷ

ಜೆರುಸೇಲಂ: ಇರಾನ್‌-ಇಸ್ರೇಲ್‌ ಸಂಘರ್ಷ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.

ಹೋರಾಟ ನಿಲ್ಲಿಸುವಂತೆ ಹಲವು ಕರೆಗಳು ಬಂದಿದ್ದರೂ, ಎರಡೂ ದೇಶಗಳು ಹಿಂದೆ ಸರಿಯದೇ ಸಂಘರ್ಷ ಮುಂದುವರಿಸಿವೆ. ಜನಸಂಖ್ಯಾ ಕೇಂದ್ರಗಳ ಮೇಲೆ ಇಸ್ರೇಲ್‌ ತೀವ್ರವಾದ ವೈಮಾನಿಕ ದಾಳಿ ನಡೆಸಿದೆ ಎಂದು ಇರಾನ್‌ ಹೇಳಿದೆ.

ಇಂದು ಬೆಳಿಗ್ಗೆ ಟೆಹರಾನ್‌ನ ವಿವಿಧೆಡೆಯೂ ಸ್ಫೋಟ ಸಂಭವಿಸಿದ್ದು, ಸಂಘರ್ಷದಲ್ಲಿ ದೇಶದಲ್ಲಿ 224 ಮಂದಿ ಮೃತಪಟ್ಟಿದ್ದು, 1,277ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇಸ್ರೇಲ್‌ ವಿರುದ್ಧ ಕೆಂಡಕಾರಿರುವ ಇರಾನ್‌ ಹಲವು ಡ್ರೋನ್‌ಗಳನ್ನು ಹಾರಿಸಿದೆ. ಇರಾನ್‌ ಪರಮಾಣು ಯೋಜನೆಯಲ್ಲಿ ಭಾಗಿಯಾಗಿರುವ ಹಲವು ವಿಜ್ಞಾನಿಗಳು ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಇರಾನ್-ಇಸ್ರೇಲ್‌ ಸಂಘರ್ಷದ ಪರಿಣಾಮ ಭಾರತದಲ್ಲಿ ತೈಲ ಬೆಲೆ ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿದ್ದು, ಜನತೆಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

11 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

12 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

14 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

14 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

16 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

16 hours ago