ಜೆರುಸೇಲಂ: ಇರಾನ್-ಇಸ್ರೇಲ್ ಸಂಘರ್ಷ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
ಹೋರಾಟ ನಿಲ್ಲಿಸುವಂತೆ ಹಲವು ಕರೆಗಳು ಬಂದಿದ್ದರೂ, ಎರಡೂ ದೇಶಗಳು ಹಿಂದೆ ಸರಿಯದೇ ಸಂಘರ್ಷ ಮುಂದುವರಿಸಿವೆ. ಜನಸಂಖ್ಯಾ ಕೇಂದ್ರಗಳ ಮೇಲೆ ಇಸ್ರೇಲ್ ತೀವ್ರವಾದ ವೈಮಾನಿಕ ದಾಳಿ ನಡೆಸಿದೆ ಎಂದು ಇರಾನ್ ಹೇಳಿದೆ.
ಇಂದು ಬೆಳಿಗ್ಗೆ ಟೆಹರಾನ್‌ನ ವಿವಿಧೆಡೆಯೂ ಸ್ಫೋಟ ಸಂಭವಿಸಿದ್ದು, ಸಂಘರ್ಷದಲ್ಲಿ ದೇಶದಲ್ಲಿ 224 ಮಂದಿ ಮೃತಪಟ್ಟಿದ್ದು, 1,277ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಸ್ರೇಲ್ ವಿರುದ್ಧ ಕೆಂಡಕಾರಿರುವ ಇರಾನ್ ಹಲವು ಡ್ರೋನ್‌ಗಳನ್ನು ಹಾರಿಸಿದೆ. ಇರಾನ್ ಪರಮಾಣು ಯೋಜನೆಯಲ್ಲಿ ಭಾಗಿಯಾಗಿರುವ ಹಲವು ವಿಜ್ಞಾನಿಗಳು ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಇರಾನ್-ಇಸ್ರೇಲ್ ಸಂಘರ್ಷದ ಪರಿಣಾಮ ಭಾರತದಲ್ಲಿ ತೈಲ ಬೆಲೆ ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿದ್ದು, ಜನತೆಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…