ದೇಶ- ವಿದೇಶ

ಅಮೆರಿಕ-ಯುಕೆ ಸೇನಾನೆಲೆ ಮೇಲೆ ಇರಾನ್ ದಾಳಿ‌ ; ವರದಿ

ಟೆಹ್ರಾನ್  : ಇಷ್ಟು ದಿನ ತನ್ನ ನೆರೆಹೊರೆಯ ದೇಶಗಳಲ್ಲಿರುವ ಅಮೆರಿಕ ಸೇನಾ ನೆಲೆಗಳ ಮೇಲೆ ದಾಳಿ ಮಾಡುತ್ತಿದ್ದ ಇರಾನ್ ಇದೀಗ ತನ್ನ ಯುದ್ಧ ಮಾದರಿಯನ್ನೇ ಬದಲಿಸಿದ್ದು, ನೇರವಾಗಿ ಅಮೆರಿಕ ಬುಡಕ್ಕೇ ಬೆಂಕಿ ಇಟ್ಟಿದೆ.

ಇರಾನ್ ತನ್ನ ದಾಳಿ ತೀವ್ರತೆಯನ್ನು ಹೆಚ್ಚಿಸಿದ್ದು, ಬರೊಬ್ಬರಿ 4,000 ಕಿಮೀ ದೂರದಲ್ಲಿರುವ ಡಿಯಾಗೋ ಗಾರ್ಸಿಯಾದಲ್ಲಿರುವ ಅಮೆರಿಕ-ಯುಕೆ ನೆಲೆಯನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದೆ.

ಇರಾನ್ ಇಷ್ಟು ದೂರದ ಗುರಿಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿರುವುದು ಇತಿಹಾಸದಲ್ಲೇ ಮೊದಲು ಎಂದು ಹೇಳಲಾಗಿದೆ. ಅಂತೆಯೇ ಇದು ದೀರ್ಘ ದಾಳಿಯ ಸಾಧ್ಯತೆಯನ್ನು ಸೂಚಿಸುತ್ತದೆ ಎನ್ನಲಾಗಿದೆ.

ಇರಾನ್ ಇತ್ತೀಚೆಗೆ ಹಿಂದೂ ಮಹಾಸಾಗರದ ಡಿಯಾಗೋ ಗಾರ್ಸಿಯಾದಲ್ಲಿರುವ ಅಮೆರಿಕ-ಬ್ರಿಟನ್ ಜಂಟಿ ಮಿಲಿಟರಿ ನೆಲೆಯ ಮೇಲೆ ತನ್ನ ಎರಡು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸಿದೆ ಎಂದು ಹೇಳಿಕೊಂಡಿತ್ತು. ಆದರೆ ಈ ದಾಳಿಯನ್ನು ಅಮೆರಿಕದ ಅಧಿಕಾರಿಗಳು ತಳ್ಳಿಹಾಕಿದ್ದರು ಎಂದು ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ವಾಲ್ ಸ್ಟ್ರೀಟ್ ಜರ್ನಲ್ ಶುಕ್ರವಾರ ವರದಿ ಮಾಡಿತ್ತು.

ವರದಿಗಳ ಪ್ರಕಾರ ಇರಾನ್ ಸುಮಾರು 4 ಸಾವಿರ ಕಿ.ಮೀ ವ್ಯಾಪ್ತಿಯ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸಿದ್ದಂತೂ ನಿಜ. ಆದರೆ ಈ ಕ್ಷಿಪಣಿಗಳು ಇರಾನ್ ಪ್ರದೇಶದಿಂದ ಸುಮಾರು 2,500 ಮೈಲುಗಳು (4,000 ಕಿಲೋಮೀಟರ್) ದೂರದಲ್ಲಿರುವ ಗುರಿಯನ್ನು ತಲುಪಿಲ್ಲ, ಆದರೆ ಈ ಉಡಾವಣೆಯು ಟೆಹ್ರಾನ್ ಹಿಂದೆ ಭಾವಿಸಿದ್ದಕ್ಕಿಂತ ಹೆಚ್ಚಿನ ವ್ಯಾಪ್ತಿಯ ಕ್ಷಿಪಣಿಗಳನ್ನು ಹೊಂದಿದೆ ಎಂದು ಸೂಚಿಸುತ್ತದೆ ಎಂದು ವರದಿ ತಿಳಿಸಿದೆ.

ಇರಾನ್ ಹಾರಿಸಿದ 2 ಕ್ಷಿಪಣಿಗಳ ಪೈಕಿ ಒಂದು ಹಾರಾಟದಲ್ಲಿ ವಿಫಲವಾದರೆ, ಮತ್ತೊಂದನ್ನು ಅಮೆರಿಕ ನೌಕಾಪಡೆಯ ಯುದ್ಧನೌಕೆಯಿಂದ ಹಾರಿಸಿದ ಇಂಟರ್‌ಸೆಪ್ಟರ್ ಗುರಿಯಾಗಿಸಿಕೊಂಡು ದಾಳಿ ಮಾಡಿ ಅದನ್ನು ನಾಶ ಮಾಡಿತು. ಆದರೂ ಕ್ಷಿಪಣಿಯನ್ನು ಹೊಡೆದಿದೆಯೇ ಎಂಬುದು ಸ್ಪಷ್ಟವಾಗಿಲ್ಲ ಎಂದು ದಿ ಜರ್ನಲ್ ವರದಿ ಮಾಡಿದೆ. ಅಂದಹಾಗೆ ಚಾಗೋಸ್ ದ್ವೀಪಗಳಲ್ಲಿರುವ ಡಿಯಾಗೋ ಗಾರ್ಸಿಯಾ ಬ್ರಿಟನ್ ಇರಾನ್‌ನಲ್ಲಿ ‘ರಕ್ಷಣಾತ್ಮಕ‘ ಕಾರ್ಯಾಚರಣೆಗಳಿಗೆ ಯುನೈಟೆಡ್ ಸ್ಟೇಟ್ಸ್ ಬಳಸಲು ಅನುಮತಿಸುತ್ತಿರುವ ಎರಡು ನೆಲೆಗಳಲ್ಲಿ ಒಂದಾಗಿದೆ.

ಅಮೆರಿಕದ ಪಡೆಗಳು ಅಫ್ಘಾನಿಸ್ತಾನ ಮತ್ತು ಇರಾಕ್‌ನಲ್ಲಿ ಅಮೆರಿಕ ಬಾಂಬ್ ದಾಳಿ ಸೇರಿದಂತೆ ಏಷ್ಯಾ ಕಾರ್ಯಾಚರಣೆಗಳ ಪ್ರಮುಖ ಕೇಂದ್ರವಾದ ಈ ನೆಲೆಯಲ್ಲಿ ಬಾಂಬರ್‌ಗಳು ಮತ್ತು ಇತರ ಉಪಕರಣಗಳನ್ನು ಇರಿಸಿವೆ.

 

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

6 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

7 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

9 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

10 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

11 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

11 hours ago