ಟೆಹ್ರಾನ್ : ಇರಾನ್ ಸರ್ಕಾರದ ವಿರುದ್ದ ಜನಾಕ್ರೋಶ ಭುಗಿಲೆದಿದ್ದು, ಸುಮಾರು 13 ದಿನಗಳಿಂದ ಜನಖರು ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದಾರೆ. ಪ್ರತಿಭಟನೆ ಹತ್ತಿಕ್ಕಲು ಇರಾನ್ ಸರ್ಕಾರ ದೇಶದಾದ್ಯಂತ ಇಂಟರ್ನೆಟ್ ಸಂಪರ್ಕವನ್ನು ಕಡಿತಗೊಳಿಸಿದರೂ ಉದ್ವಿಗ್ನತೆ ತಣ್ಣಗಾಗಿಲ್ಲ.
ಭದ್ರತಾ ಪಡೆಗಳು ಪ್ರತಿಭಟನಾಕಾರರ ಮೇಲೆ ನಡೆಸಿದ ಗುಂಡಿನ ದಾಳಿಯಿಂದ ಪರಿಸ್ಥಿತಿ ಮತ್ತಷ್ಟು ಭೀಕರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚುತ್ತಿರುವ ವರದಿಗಳು ಹೊರಬರುತ್ತಿವೆ.
ಸ್ಥಳೀಯ ವರದಿಗಳ ಪ್ರಕಾರ, ರಾಜಧಾನಿ ಟೆಹ್ರಾನ್‌ನ ವಿವಿಧ ಆಸ್ಪತ್ರೆಗಳಲ್ಲಿ ಕನಿಷ್ಠ 200ಕ್ಕೂ ಹೆಚ್ಚು ಪ್ರತಿಭಟನಾಕಾರರು ಮೃತಪಟ್ಟಿದ್ದಾರೆ. ಗುಂಡಿನ ದಾಳಿಯೇ ಹೆಚ್ಚಿನ ಸಾವುಗಳಿಗೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.
ಉತ್ತರ ಟೆಹ್ರಾನ್‌ನಲ್ಲಿ ನಡೆದ ಪ್ರತಿಭಟನೆಯ ವೇಳೆ ಭದ್ರತಾ ಪಡೆಗಳು ಏಕಾಏಕಿ ಗುಂಡಿನ ಮಳೆ ಸುರಿಸಿದ್ದು, 30ಕ್ಕೂ ಹೆಚ್ಚು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆಂದು ಹೇಳಲಾಗುತ್ತಿದೆ.
ಪ್ರತಿಭಟನೆ ವ್ಯಾಪಕವಾಗುತ್ತಿದ್ದಂತೆ, ಸರ್ಕಾರ ದೇಶಾದ್ಯಂತ ಇಂಟರ್ನೆಟ್ ಮತ್ತು ದೂರವಾಣಿ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿದೆ. ಆದರೂ ಹೋರಾಟಗಳು ಇನ್ನೂ ಮುಂದುವರಿದಿವೆ ಎಂದು ತಿಳಿದುಬಂದಿದೆ.
ಆರ್ಥಿಕತೆ ಕುಸಿತದಿಂದಾಗಿ ಡಿ.28ರಂದು ತೆಹ್ರಾನ್‌ನಲ್ಲಿ ಆರಂಭವಾದ ಮುಷ್ಕರ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿಭಟನಾಕಾರರು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ‘ಸರ್ವಾಧಿಕಾರಿಗೆ ಸಾವಾಗಲಿ’ ಹಾಗೂ ಖಮೇನಿ ನಾಶವಾಗಲಲಿ ಎಂದು ಘೋಷಣೆಗಳನ್ನು ಕೂಗುತ್ತಿದ್ದಾರೆ.
ಈ ನಡುವೆ ಇರಾನ್ ಪ್ರತಿಭಟನಾಕಾರರನನ್ನು ಹಿಂಸಾತ್ಮಕವಾಗಿ ಕೊಂದರೆ ಅಮೆರಿಕ ಮಧ್ಯಪ್ರವೇಶಿಸಿ ಅವರ ರಕ್ಷಣೆಗೆ ಮುಂದಾಗಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿಕೆಯನ್ನು ನೀಡಿದ್ದು, ಯುದ್ದಕ್ಕೆ ಸಿದ್ದ ಎಂಬ ಸಂದೇಶ ನೀಡಿದ್ದಾರೆ.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…