ಟೆಹರಾನ್: ಯುದ್ಧದ ಖರ್ಚು ನಿಭಾಯಿಸಲು ಸಂಚಾರ ಮಾಡುವ ವ್ಯಾಪಾರಿ ಹಡಗುಗಳಿಗೆ ಶುಲ್ಕ ವಿಧಿಸಲು ಇರಾನ್ ನಿರ್ಧರಿಸಿದೆ.
ಹಾರ್ಮುಜ್ ಜಲಸಂಧಿ ಮೂಲಕ ಹಾದುಹೋಗುವ ವ್ಯಾಪಾರಿ ಹಡಗುಗಳಿಗೆ ಇರಾನ್ 2 ಮಿಲಿಯನ್ ಡಾಲರ್ ಎಂದರೆ ಅಂದಾಜು 18.77 ಕೋಟಿ ರೂಪಾಯಿಗಳಷ್ಟು ಶುಲ್ಕ ವಿಧಿಸುತ್ತಿದೆ. ಈ ಬಗ್ಗೆ ಇರಾನ್ ಸಂಸತ್ತಿನ ರಾಷ್ಟ್ರೀಯ ಭದ್ರತಾ ಸಮಿತಿಯ ಸದಸ್ಯರಾದ ಅಲಾಯೆದ್ದೀನ್ ಬೊರೊಜೆರ್ಡಿ ಮಾಹಿತಿ ಹಂಚಿಕೊಂಡಿದ್ದಾರೆ.
ಯುದ್ಧದ ಖರ್ಚುಗಳನ್ನು ನಿಭಾಯಿಸಲು ಈ ಮಾರ್ಗದಲ್ಲಿ ಸಂಚರಿಸುವ ವ್ಯಾಪಾರಿಗಳ ಮೇಲೆ ಶುಲ್ಕ ಹೇರಲಾಗುತ್ತಿದ್ದು ಸಂಚಾರಕ್ಕೆ ಅನುಮತಿ ಪಡೆದುಕೊಳ್ಳಲು ವ್ಯಾಪಾರಿ ಹಡಗುಗಳು ಶುಲ್ಕ ಭರಿಸಬೇಕಾಗಿದೆ.
48 ಗಂಟೆಗಳ ಒಳಗೆ ಜಲಸಂಧಿಯನ್ನು ಮತ್ತೆ ತೆರೆಯದಿದ್ದರೆ, ಅಮೆರಿಕವು ಇರಾನ್‌ನ ವಿದ್ಯುತ್ ಮೂಲಸೌಕರ್ಯವನ್ನು ನಾಶಪಡಿಸುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದ ಬೆನ್ನಲ್ಲೇ ಇರಾನ್ ಈ ಕ್ರಮ ಕೈಗೊಂಡಿದೆ. ಇರಾನ್ ಮೂಲಸೌಕರ್ಯಗಳ ಮೇಲೆ ದಾಳಿ ಮಾಡಿದರೆ, ಜಲಸಂಧಿಯನ್ನು ಸಂಪೂರ್ಣ ಬಂದ್ ಮಾಡಲಾಗುತ್ತದೆ ಎಂದು ಇರಾನ್ ಕೌಂಟರ್ ಕೊಟ್ಟಿದೆ.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೇರಂಬಾಡಿ ಗ್ರಾಮದ ಜಮೀನೊಂದರಲ್ಲಿ ಉಪಟಳ ನೀಡುತಿದ್ದ ಹುಲಿಯನ್ನು ಅರಣ್ಯ ಇಲಾಖೆ…
ಮಂಡ್ಯ: ಯುಗಾದಿ ಹಬ್ಬದ ದಿನ ಪಚ್ಚಿ ಆಟವಾಡುತ್ತಿದ್ದ ನೂರಾರು ಮಂದಿ ಮೇಲೆ ದಾಳಿ ನಡೆಸಿದ್ದೂ ಅಲ್ಲದೆ ಯುವಕನ ಮೇಲೆ ಮಾರಣಾಂತಿಕ…
ನಂಜನಗೂಡು: ದಿನಾಂಕ 7-3-26 ರಂದು ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ ದಂಡೆಯ ಮೇಲೆ 46 ಬೃಹತ್ ಮರಗಳನ್ನು…
ವಾಷಿಂಗ್ಟನ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಐದು ದಿನಗಳ ಕಾಲ ಕದನ ವಿರಾಮ ಘೋಷಣೆ ಮಾಡಿದ್ದಾರೆ. ಅಮೇರಿಕಾ ಅಧ್ಯಕ್ಷ ಟ್ರಂಪ್…
ಬೆಂಗಳೂರು: ಇಸ್ರೇಲ್-ಇರಾನ್ ನಡುವಿನ ಯುದ್ಧ ಪರಿಸ್ಥಿತಿಯಿಂದಾಗಿ ಚಿನ್ನ ಮತ್ತು ಬೆಳ್ಳಿ ದರಗಳ ಸತತ ಕುಸಿತ ಮುಂದುವರೆದಿದೆ. ಇಂದೂ ಕೂಡ ಚಿನ್ನ,…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷದಿಂದಾಗಿ ಪಶ್ಚಿಮ ಏಷ್ಯಾದಲ್ಲಿ ರಾಷ್ಟ್ರಗಳ ಸ್ಥಿತಿ ಚಿಂತಾಜನಕವಾಗಿದೆ. ಯುದ್ಧದಿಂದ ಭಾರತದ ಮೇಲೆ ಪರಿಣಾಮ ಬೀರಿದೆ ಎಂದು ಪ್ರಧಾನಿ…