ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ನಾಗರಿಕ ವಿಮಾನಯಾನ ನಿರ್ದೇಶನಾಲಯ ಗಲ್ಪ್ ಪ್ರದೇಶದಲ್ಲಿನ 9 ವಾಯು ಪ್ರದೇಶಗಳಲ್ಲಿ ಹಾರಾಟ ನಡೆಸದಂತೆ ವಿಮಾನಯಾನ ಸಂಸ್ಥೆಗಳಿಗೆ ಸೂಚನೆ ನೀಡಿದೆ.
ಬಹ್ರೇನ್ ಇರಾನ್, ಇರಾಕ್, ಇಸ್ರೇಲ್, ಜೋರ್ಡಾನ್, ಕುವೈತ್, ಲೆಬನಾನ್, ಕತಾರ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ವಾಯುಪ್ರದೇಶಗಳನ್ನು ತಪ್ಪಿಸುವಂತೆ ಡಿಜಿಸಿಎ ಕೇಳಿಕೊಂಡಿದೆ. ಭಾರತೀಯ ವಿಮಾನಯಾನ ಸಂಸ್ಥೆಗಳು ಕೆಲವು ಷರತ್ತುಗಳಿಗೆ ಒಳಪಟ್ಟು ಒಮನ್ ಮತ್ತು ಸೌದಿ ಅರೇಬಿಯಾ ವಾಯುಪ್ರದೇಶಗಳ ಮೇಲೆ ಹಾರಾಟ ನಡೆಸಬಹುದು ಎಂದು ನಿಯಂತ್ರಕ ತಿಳಿಸಿದೆ.
ವಾಯುಪ್ರದೇಶದೊಳಗೆ ಎಫ್‍ಎಲ್ 320 ಅಥವಾ 32,000 ಅಡಿಗಳಿಗಿಂತ ಕಡಿಮೆ ಕಾರ್ಯನಿರ್ವಹಿಸದಂತೆ ವಿಮಾನಯಾನ ಸಂಸ್ಥೆಗಳಿಗೆ ತಿಳಿಸಿದೆ. ಭಾರತೀಯ ವಿಮಾನಯಾನ ಸಂಸ್ಥೆಗಳು ಕೆಲವು ಷರತ್ತುಗಳಿಗೆ ಒಳಪಟ್ಟು ಒಮಾನ್ ಮತ್ತು ಸೌದಿ ಅರೇಬಿಯಾ ವಾಯುಪ್ರದೇಶಗಳ ಮೇಲೆ ಹಾರಾಟ ನಡೆಸಬಹುದು. ಇರಾನ್‍ನಲ್ಲಿನ ಗುರಿಗಳ ಮೇಲೆ ಅಮೆರಿಕ ಮತ್ತು ಇಸ್ರೇಲ್ ಇತ್ತೀಚೆಗೆ ನಡೆಸಿದ ಮಿಲಿಟರಿ ದಾಳಿಗಳು ನಾಗರಿಕ ವಿಮಾನಯಾನಕ್ಕೆ ಹೆಚ್ಚಿನ ಅಪಾಯದ ವಾತಾವರಣವನ್ನು ಸೃಷ್ಟಿಸಿವೆ ಎಂದು ಡಿಜಿಸಿಎ ಹೇಳಿದೆ.
ಇದರ ಜೊತೆಗೆ, ಒಮನ್ ಮತ್ತು ಸೌದಿ ಅರೇಬಿಯಾ ವಾಯುಪ್ರದೇಶಗಳ ಮೇಲೆ ಹಾರಾಟ ನಡೆಸಲು ಕೆಲವು ನಿರ್ಬಂಧಗಳೊಂದಿಗೆ ಅವಕಾಶ ನೀಡಲಾಗಿದೆ. ಈ ಪ್ರದೇಶಗಳಲ್ಲಿ ಹಾರಾಟ ನಡೆಸುವ ವಿಮಾನಗಳು 32,000 ಅಡಿ ಗಿಂತ ಕಡಿಮೆ ಎತ್ತರದಲ್ಲಿ ಹಾರಬಾರದು ಎಂಬ ಕಟ್ಟುನಿಟ್ಟಿನ ನಿಯಮವನ್ನು ಜಾರಿಗೊಳಿಸಲಾಗಿದೆ. ಈ ನಿಯಮ ತಕ್ಷಣದಿಂದ ಜಾರಿಗೆ ಬಂದಿದ್ದು, ಮಾರ್ಚ್ 28ರವರೆಗೆ ಮುಂದುವರಿಯಲಿದೆ.
ಇರಾನ್‍ನ ಪ್ರಮುಖ ಗುರಿಗಳ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಗಳು, ಹಾಗೆಯೇ ಇರಾನ್ ಘೋಷಿಸಿರುವ ಪ್ರತೀಕಾರದ ಕ್ರಮಗಳು ಪರಿಸ್ಥಿತಿಯನ್ನು ಮತ್ತಷ್ಟು ಗಂಭೀರಗೊಳಿಸಿವೆ. ಕ್ಷಿಪಣಿ ದಾಳಿ, ಡ್ರೋನ್ ಹಾರಾಟ ಹಾಗೂ ವಾಯು ರಕ್ಷಣಾ ವ್ಯವಸ್ಥೆಗಳ ಸಕ್ರಿಯತೆಯಿಂದ ನಾಗರಿಕ ವಿಮಾನಗಳಿಗೆ ಅಪಾಯ ಹೆಚ್ಚಾಗಿದೆ. ಈ ಹಿನ್ನೆಲೆ ಆಉಅಂ ಮುನ್ನೆಚ್ಚರಿಕೆಯಾಗಿ ಈ ಮಾರ್ಗಸೂಚಿ ಹೊರಡಿಸಿದೆ.
ಮಧ್ಯಪ್ರಾಚ್ಯದ ಈ ಉದ್ವಿಗ್ನ ಪರಿಸ್ಥಿತಿ ಜಾಗತಿಕ ಮಟ್ಟದಲ್ಲಿಯೂ ಪರಿಣಾಮ ಬೀರುತ್ತಿದೆ. ಕತಾರ್‍ನ ನೈಸರ್ಗಿಕ ಅನಿಲ ಘಟಕದ ಮೇಲೆ ನಡೆದ ದಾಳಿಯ ಪರಿಣಾಮವಾಗಿ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಎದುರಾಗಿದೆ. ಭಾರತ ಮತ್ತು ಚೀನಾ ಸೇರಿದಂತೆ ಅನೇಕ ದೇಶಗಳು ಕತಾರ್‍ನ ಅನಿಲವನ್ನು ಅವಲಂಬಿಸಿಕೊಂಡಿರುವುದರಿಂದ, ಇಂಧನ ಕ್ಷೇತ್ರದಲ್ಲಿ ಒತ್ತಡ ಹೆಚ್ಚುವ ಆತಂಕ ವ್ಯಕ್ತವಾಗಿದೆ.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…