ದೇಶ- ವಿದೇಶ

ಇರಾನ್-ಇಸ್ರೇಲ್‌ ಸಂಘರ್ಷ: 9 ವಾಯುಪ್ರದೇಶಗಳಲ್ಲಿ ವಿಮಾನ ಹಾರಾಟ ನಡೆಸದಂತೆ DGCA ಸೂಚನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ನಾಗರಿಕ ವಿಮಾನಯಾನ ನಿರ್ದೇಶನಾಲಯ ಗಲ್ಪ್ ಪ್ರದೇಶದಲ್ಲಿನ 9 ವಾಯು ಪ್ರದೇಶಗಳಲ್ಲಿ ಹಾರಾಟ ನಡೆಸದಂತೆ ವಿಮಾನಯಾನ ಸಂಸ್ಥೆಗಳಿಗೆ ಸೂಚನೆ ನೀಡಿದೆ.

ಬಹ್ರೇನ್ ಇರಾನ್, ಇರಾಕ್, ಇಸ್ರೇಲ್, ಜೋರ್ಡಾನ್, ಕುವೈತ್, ಲೆಬನಾನ್, ಕತಾರ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ವಾಯುಪ್ರದೇಶಗಳನ್ನು ತಪ್ಪಿಸುವಂತೆ ಡಿಜಿಸಿಎ ಕೇಳಿಕೊಂಡಿದೆ. ಭಾರತೀಯ ವಿಮಾನಯಾನ ಸಂಸ್ಥೆಗಳು ಕೆಲವು ಷರತ್ತುಗಳಿಗೆ ಒಳಪಟ್ಟು ಒಮನ್ ಮತ್ತು ಸೌದಿ ಅರೇಬಿಯಾ ವಾಯುಪ್ರದೇಶಗಳ ಮೇಲೆ ಹಾರಾಟ ನಡೆಸಬಹುದು ಎಂದು ನಿಯಂತ್ರಕ ತಿಳಿಸಿದೆ.

ವಾಯುಪ್ರದೇಶದೊಳಗೆ ಎಫ್‍ಎಲ್ 320 ಅಥವಾ 32,000 ಅಡಿಗಳಿಗಿಂತ ಕಡಿಮೆ ಕಾರ್ಯನಿರ್ವಹಿಸದಂತೆ ವಿಮಾನಯಾನ ಸಂಸ್ಥೆಗಳಿಗೆ ತಿಳಿಸಿದೆ. ಭಾರತೀಯ ವಿಮಾನಯಾನ ಸಂಸ್ಥೆಗಳು ಕೆಲವು ಷರತ್ತುಗಳಿಗೆ ಒಳಪಟ್ಟು ಒಮಾನ್ ಮತ್ತು ಸೌದಿ ಅರೇಬಿಯಾ ವಾಯುಪ್ರದೇಶಗಳ ಮೇಲೆ ಹಾರಾಟ ನಡೆಸಬಹುದು. ಇರಾನ್‍ನಲ್ಲಿನ ಗುರಿಗಳ ಮೇಲೆ ಅಮೆರಿಕ ಮತ್ತು ಇಸ್ರೇಲ್ ಇತ್ತೀಚೆಗೆ ನಡೆಸಿದ ಮಿಲಿಟರಿ ದಾಳಿಗಳು ನಾಗರಿಕ ವಿಮಾನಯಾನಕ್ಕೆ ಹೆಚ್ಚಿನ ಅಪಾಯದ ವಾತಾವರಣವನ್ನು ಸೃಷ್ಟಿಸಿವೆ ಎಂದು ಡಿಜಿಸಿಎ ಹೇಳಿದೆ.

ಇದರ ಜೊತೆಗೆ, ಒಮನ್ ಮತ್ತು ಸೌದಿ ಅರೇಬಿಯಾ ವಾಯುಪ್ರದೇಶಗಳ ಮೇಲೆ ಹಾರಾಟ ನಡೆಸಲು ಕೆಲವು ನಿರ್ಬಂಧಗಳೊಂದಿಗೆ ಅವಕಾಶ ನೀಡಲಾಗಿದೆ. ಈ ಪ್ರದೇಶಗಳಲ್ಲಿ ಹಾರಾಟ ನಡೆಸುವ ವಿಮಾನಗಳು 32,000 ಅಡಿ ಗಿಂತ ಕಡಿಮೆ ಎತ್ತರದಲ್ಲಿ ಹಾರಬಾರದು ಎಂಬ ಕಟ್ಟುನಿಟ್ಟಿನ ನಿಯಮವನ್ನು ಜಾರಿಗೊಳಿಸಲಾಗಿದೆ. ಈ ನಿಯಮ ತಕ್ಷಣದಿಂದ ಜಾರಿಗೆ ಬಂದಿದ್ದು, ಮಾರ್ಚ್ 28ರವರೆಗೆ ಮುಂದುವರಿಯಲಿದೆ.

ಇರಾನ್‍ನ ಪ್ರಮುಖ ಗುರಿಗಳ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಗಳು, ಹಾಗೆಯೇ ಇರಾನ್ ಘೋಷಿಸಿರುವ ಪ್ರತೀಕಾರದ ಕ್ರಮಗಳು ಪರಿಸ್ಥಿತಿಯನ್ನು ಮತ್ತಷ್ಟು ಗಂಭೀರಗೊಳಿಸಿವೆ. ಕ್ಷಿಪಣಿ ದಾಳಿ, ಡ್ರೋನ್ ಹಾರಾಟ ಹಾಗೂ ವಾಯು ರಕ್ಷಣಾ ವ್ಯವಸ್ಥೆಗಳ ಸಕ್ರಿಯತೆಯಿಂದ ನಾಗರಿಕ ವಿಮಾನಗಳಿಗೆ ಅಪಾಯ ಹೆಚ್ಚಾಗಿದೆ. ಈ ಹಿನ್ನೆಲೆ ಆಉಅಂ ಮುನ್ನೆಚ್ಚರಿಕೆಯಾಗಿ ಈ ಮಾರ್ಗಸೂಚಿ ಹೊರಡಿಸಿದೆ.

ಮಧ್ಯಪ್ರಾಚ್ಯದ ಈ ಉದ್ವಿಗ್ನ ಪರಿಸ್ಥಿತಿ ಜಾಗತಿಕ ಮಟ್ಟದಲ್ಲಿಯೂ ಪರಿಣಾಮ ಬೀರುತ್ತಿದೆ. ಕತಾರ್‍ನ ನೈಸರ್ಗಿಕ ಅನಿಲ ಘಟಕದ ಮೇಲೆ ನಡೆದ ದಾಳಿಯ ಪರಿಣಾಮವಾಗಿ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಎದುರಾಗಿದೆ. ಭಾರತ ಮತ್ತು ಚೀನಾ ಸೇರಿದಂತೆ ಅನೇಕ ದೇಶಗಳು ಕತಾರ್‍ನ ಅನಿಲವನ್ನು ಅವಲಂಬಿಸಿಕೊಂಡಿರುವುದರಿಂದ, ಇಂಧನ ಕ್ಷೇತ್ರದಲ್ಲಿ ಒತ್ತಡ ಹೆಚ್ಚುವ ಆತಂಕ ವ್ಯಕ್ತವಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

3 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

3 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

3 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

3 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

3 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

3 hours ago