Mysore
30
broken clouds

Social Media

ಸೋಮವಾರ, 27 ಏಪ್ರಿಲ 2026
Light
Dark

ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆ: ಏನದು ಗೊತ್ತಾ.?

LPG cylinder price reduction for commercial use

ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ.

ತೈಲ ಕಂಪನಿಗಳು ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಇಳಿಕೆ ಮಾಡಿದ್ದು, ದೆಹಲಿ, ಕೋಲ್ಕತ್ತಾ, ಮುಂಬೈ, ಮತ್ತು ಚೆನ್ನೈನಂತಹ ಪ್ರಮುಖ ನಗರಗಳಲ್ಲಿ ದರಗಳು ಕಡಿಮೆಯಾಗಿದ್ದು, ಹೊಸ ದರಗಳು ಭಾನುವಾರದಿಂದಲೇ ಜಾರಿಗೆ ಬಂದಿವೆ.

ಇಂದು ವಾಣಿಜ್ಯ ಬಳಕೆಯ 19 ಕೆಜಿಯ ಸಿಲಿಂಡರ್ ಬೆಲೆಯಲ್ಲಿ 28 ರಿಂದ 31 ರೂ.ಗಳಷ್ಟು ಕಡಿಮೆಯಾಗಿದ್ದು, ಈ ಬೆಲೆಗಳು ನಗರದಿಂದ ನಗರಕ್ಕೆ ವ್ಯತ್ಯಾಸವಾಗಿರುತ್ತದೆ. ಗೃಹ ಬಳಕೆ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆಗಳು ಆಗಿಲ್ಲ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆಜಿ ಸಿಲಿಂಡರ್ ಬೆಲೆಯಲ್ಲಿ 28 ರೂ.ಗಳಷ್ಟು ಕಡಿಮೆಯಾಗಿದೆ. ಫೆಬ್ರವರಿಯಲ್ಲಿ 1768.5 ರೂ.ಗಳಷ್ಟಿದ್ದ ಕಮರ್ಷಿಯಲ್ ಸಿಲಿಂಡರ್ ಬೆಲೆ ಈ ತಿಂಗಳು 1740.5 ರೂ.ಗಳಿಗೆ ಇಳಿಕೆಯಾಗಿದೆ.

ಅಂತೆಯೇ ಕೋಲ್ಕತ್ತಾದಲ್ಲಿ 19 ಕೆಜಿ ಸಿಲಿಂಡರ್ ಬೆಲೆಯಲ್ಲಿ 31 ರೂ.ಗಳಷ್ಟು ಇಳಿಕೆಯಾಗಿದೆ. 1875.5 ರೂ.ಗಳಿಗೆ ಸಿಗುತ್ತಿದ್ದ ಎಲ್‌ಪಿಜಿ ಸಿಲಿಂಡರ್ 1844.5 ರೂ.ಗೆ ಲಭ್ಯವಾಗಲಿದೆ. ಮುಂಬೈ ಮತ್ತು ಚೆನ್ನೈನಲ್ಲಿ ಕ್ರಮವಾಗಿ 28.5 ಮತ್ತು 29.5 ರೂ.ಗಳಷ್ಟು ಕುಸಿತವಾಗಿದೆ.

ಬೆಂಗಳೂರಿನಲ್ಲೂ ಎಲ್‌ಪಿಜಿ ಸಿಲಿಂಡರ್ ಬೆಲೆ ಕಡಿಮೆಯಾಗಿದ್ದು, ಗೃಹ ಬಳಕೆಯ 14.2 ಕೆಜಿ ಸಿಲಿಂಡರ್ ಬೆಲೆ 855 ರೂಪಾಯಿಗಳಷ್ಟಿದ್ದರೆ, ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ: 1841 ರೂಪಾಯಿಗೆ ಕುಸಿದಿದೆ.

ಎಲ್‌ಪಿಜಿ ಬೆಲೆಗಳನ್ನು ಇಂಡಿಯನ್ ಆಯಿಲ್ ಕಾರ್ಪೊರೇಷನ್, ಎಚ್ಪಿಸಿಎಲ್ ಮತ್ತು ಬಿಪಿಸಿಎಲ್‌ನಂತಹ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) ನಿರ್ಧರಿಸುತ್ತವೆ.

Tags:
error: Content is protected !!