LPG cylinder price reduction for commercial use
ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ.
ತೈಲ ಕಂಪನಿಗಳು ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಇಳಿಕೆ ಮಾಡಿದ್ದು, ದೆಹಲಿ, ಕೋಲ್ಕತ್ತಾ, ಮುಂಬೈ, ಮತ್ತು ಚೆನ್ನೈನಂತಹ ಪ್ರಮುಖ ನಗರಗಳಲ್ಲಿ ದರಗಳು ಕಡಿಮೆಯಾಗಿದ್ದು, ಹೊಸ ದರಗಳು ಭಾನುವಾರದಿಂದಲೇ ಜಾರಿಗೆ ಬಂದಿವೆ.
ಇಂದು ವಾಣಿಜ್ಯ ಬಳಕೆಯ 19 ಕೆಜಿಯ ಸಿಲಿಂಡರ್ ಬೆಲೆಯಲ್ಲಿ 28 ರಿಂದ 31 ರೂ.ಗಳಷ್ಟು ಕಡಿಮೆಯಾಗಿದ್ದು, ಈ ಬೆಲೆಗಳು ನಗರದಿಂದ ನಗರಕ್ಕೆ ವ್ಯತ್ಯಾಸವಾಗಿರುತ್ತದೆ. ಗೃಹ ಬಳಕೆ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆಗಳು ಆಗಿಲ್ಲ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆಜಿ ಸಿಲಿಂಡರ್ ಬೆಲೆಯಲ್ಲಿ 28 ರೂ.ಗಳಷ್ಟು ಕಡಿಮೆಯಾಗಿದೆ. ಫೆಬ್ರವರಿಯಲ್ಲಿ 1768.5 ರೂ.ಗಳಷ್ಟಿದ್ದ ಕಮರ್ಷಿಯಲ್ ಸಿಲಿಂಡರ್ ಬೆಲೆ ಈ ತಿಂಗಳು 1740.5 ರೂ.ಗಳಿಗೆ ಇಳಿಕೆಯಾಗಿದೆ.
ಅಂತೆಯೇ ಕೋಲ್ಕತ್ತಾದಲ್ಲಿ 19 ಕೆಜಿ ಸಿಲಿಂಡರ್ ಬೆಲೆಯಲ್ಲಿ 31 ರೂ.ಗಳಷ್ಟು ಇಳಿಕೆಯಾಗಿದೆ. 1875.5 ರೂ.ಗಳಿಗೆ ಸಿಗುತ್ತಿದ್ದ ಎಲ್‌ಪಿಜಿ ಸಿಲಿಂಡರ್ 1844.5 ರೂ.ಗೆ ಲಭ್ಯವಾಗಲಿದೆ. ಮುಂಬೈ ಮತ್ತು ಚೆನ್ನೈನಲ್ಲಿ ಕ್ರಮವಾಗಿ 28.5 ಮತ್ತು 29.5 ರೂ.ಗಳಷ್ಟು ಕುಸಿತವಾಗಿದೆ.
ಬೆಂಗಳೂರಿನಲ್ಲೂ ಎಲ್‌ಪಿಜಿ ಸಿಲಿಂಡರ್ ಬೆಲೆ ಕಡಿಮೆಯಾಗಿದ್ದು, ಗೃಹ ಬಳಕೆಯ 14.2 ಕೆಜಿ ಸಿಲಿಂಡರ್ ಬೆಲೆ 855 ರೂಪಾಯಿಗಳಷ್ಟಿದ್ದರೆ, ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ: 1841 ರೂಪಾಯಿಗೆ ಕುಸಿದಿದೆ.
ಎಲ್‌ಪಿಜಿ ಬೆಲೆಗಳನ್ನು ಇಂಡಿಯನ್ ಆಯಿಲ್ ಕಾರ್ಪೊರೇಷನ್, ಎಚ್ಪಿಸಿಎಲ್ ಮತ್ತು ಬಿಪಿಸಿಎಲ್‌ನಂತಹ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) ನಿರ್ಧರಿಸುತ್ತವೆ.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…