ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾಪ್ಸ್ ವಕ್ತಾರ ಬ್ರಿಗೇಡಿಯರ್ ಜನರಲ್ ಅಲಿ ಮೊಹಮ್ಮದ್ ನೈನಿ ಸೇರಿದಂತೆ ಹಲವು ಉನ್ನತ ಮಟ್ಟದ ಸೇನಾಧಿಕಾರಿಗಳು ಈ ದಾಳಿಯಲ್ಲಿ ಮೃತಪಟ್ಟಿದ್ದಾರೆ.
ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ 20 ದಿನಗಳಲ್ಲಿ ಇರಾನ್ ಮೇಲೆ ನಡೆದ ಅತ್ಯಂತ ದೊಡ್ಡ ಪ್ರಹಾರ ಇದಾಗಿದೆ.
ಇಸ್ರೇಲ್ ರಕ್ಷಣಾ ಪಡೆ ಈ ಹತ್ಯೆಯನ್ನು ಖಚಿತಪಡಿಸಿದ್ದು, ಇರಾನ್‌ನ ಆಂತರಿಕ ಮತ್ತು ಜಾಗತಿಕ ಭಯೋತ್ಪಾದಕ ಚಟುವಟಿಕೆಗಳ ಸಂಚುಗಾರರನ್ನು ಈ ಮೂಲಕ ಮಟ್ಟ ಹಾಕಲಾಗಿದೆ ಎಂದು ಹೇಳಿದೆ.





