Mysore
32
few clouds

Social Media

ಸೋಮವಾರ, 23 ಮಾರ್ಚ್ 2026
Light
Dark

ಮಧ್ಯಪ್ರಾಚ್ಯ ಸಂಘರ್ಷ: ರಾಜ್ಯಗಳೊಂದಿಗೆ ಸಮನ್ವಯ ಸಾಧಿಸಲು ಪ್ರಧಾನಿ ಮೋದಿ ಸಲಹೆ

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ವೇಳೆ ದೇಶದ ಮೇಲಾಗುವ ಪ್ರತಿಕೂಲ ಪರಿಣಾಮಗಳ ಬಗ್ಗೆ ಕೇಂದ್ರ ಸರ್ಕಾರ ಸತತ ನಿಗಾ ವಹಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಹಿರಿಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಮಹತ್ವದ ಚರ್ಚೆ ನಡೆಸಿದ್ದಾರೆ.

ದೇಶದ ಸದ್ಯದ ಪರಿಸ್ಥಿತಿ ಅವಲೋಕಿಸಿದ ಪ್ರಧಾನಿ ಭವಿಷ್ಯದಲ್ಲಿ ಭಾರತದ ಮೇಲಾಗುವ ಪರಿಣಾಮ ಹಾಗೂ ಸರ್ಕಾರ ಜನಹಿತಕ್ಕಾಗಿ ಕೈಗೊಳ್ಳಬಹುದಾದ ಪರಿಹಾರ, ಪರ್ಯಾಯ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು. ಅಲ್ಲದೇ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್‌ ಜೋಶಿ ಅವರನ್ನು ಒಳಗೊಂಡಂತೆ ಹಿರಿಯ ಸಚಿವರುಗಳ ತಂಡ ಸಹ ರಚಿಸಿದ್ದಾರೆ.

ಪಶ್ಚಿಮ ಏಷ್ಯಾ ಸಂಘರ್ಷದಿಂದ ಜಾಗತಿಲ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಖಾರಿಫ್‌ ಋತುವಿನಲ್ಲಿ ರೈತರ ಮೇಲಾಗುವ ಪರಿಣಾಮ ಮತ್ತು ರಸಗೊಬ್ಬರ ಅಗತ್ಯತೆ, ಪೂರೈಕೆ ಬಗ್ಗೆ ನಿರ್ಣಯ ಕೈಗೊಂಡರು. ಅಲ್ಲದೇ, ರಸಗೊಬ್ಬರ ದಾಸ್ತಾನು, ಲಭ್ಯತೆ ಹಾಗೂ ಪರ್ಯಾಯ ಮೂಲಗಳ ಕುರಿತು ಚರ್ಚೆ ನಡೆಸಿದ್ದಾರೆ.

 

Tags:
error: Content is protected !!