ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ವೇಳೆ ದೇಶದ ಮೇಲಾಗುವ ಪ್ರತಿಕೂಲ ಪರಿಣಾಮಗಳ ಬಗ್ಗೆ ಕೇಂದ್ರ ಸರ್ಕಾರ ಸತತ ನಿಗಾ ವಹಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಹಿರಿಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಮಹತ್ವದ ಚರ್ಚೆ ನಡೆಸಿದ್ದಾರೆ.
ದೇಶದ ಸದ್ಯದ ಪರಿಸ್ಥಿತಿ ಅವಲೋಕಿಸಿದ ಪ್ರಧಾನಿ ಭವಿಷ್ಯದಲ್ಲಿ ಭಾರತದ ಮೇಲಾಗುವ ಪರಿಣಾಮ ಹಾಗೂ ಸರ್ಕಾರ ಜನಹಿತಕ್ಕಾಗಿ ಕೈಗೊಳ್ಳಬಹುದಾದ ಪರಿಹಾರ, ಪರ್ಯಾಯ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು. ಅಲ್ಲದೇ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಒಳಗೊಂಡಂತೆ ಹಿರಿಯ ಸಚಿವರುಗಳ ತಂಡ ಸಹ ರಚಿಸಿದ್ದಾರೆ.
ಪಶ್ಚಿಮ ಏಷ್ಯಾ ಸಂಘರ್ಷದಿಂದ ಜಾಗತಿಲ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಖಾರಿಫ್ ಋತುವಿನಲ್ಲಿ ರೈತರ ಮೇಲಾಗುವ ಪರಿಣಾಮ ಮತ್ತು ರಸಗೊಬ್ಬರ ಅಗತ್ಯತೆ, ಪೂರೈಕೆ ಬಗ್ಗೆ ನಿರ್ಣಯ ಕೈಗೊಂಡರು. ಅಲ್ಲದೇ, ರಸಗೊಬ್ಬರ ದಾಸ್ತಾನು, ಲಭ್ಯತೆ ಹಾಗೂ ಪರ್ಯಾಯ ಮೂಲಗಳ ಕುರಿತು ಚರ್ಚೆ ನಡೆಸಿದ್ದಾರೆ.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…