Mysore
27
broken clouds

Social Media

ಸೋಮವಾರ, 23 ಮಾರ್ಚ್ 2026
Light
Dark

ಮುಂದುವರಿದ ಇರಾನ್-ಇಸ್ರೇಲ್‌ ಸಂಘರ್ಷ: ಸಿಲಿಂಡರ್‌ ಪೂರೈಕೆ ವ್ಯತ್ಯಯ ಆಗದಂತೆ ಕ್ರಮ ಎಂದ ಪ್ರಧಾನಿ ಮೋದಿ

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷದಿಂದಾಗಿ ಪಶ್ಚಿಮ ಏಷ್ಯಾದಲ್ಲಿ ರಾಷ್ಟ್ರಗಳ ಸ್ಥಿತಿ ಚಿಂತಾಜನಕವಾಗಿದೆ. ಯುದ್ಧದಿಂದ ಭಾರತದ ಮೇಲೆ ಪರಿಣಾಮ ಬೀರಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಈ ಕುರಿತು ಲೋಕಸಭೆಯಲ್ಲಿಂದು ಮಾತನಾಡಿದ ಅವರು, ಯುದ್ಧ ಮತ್ತಷ್ಟು ಉಲ್ಬಣಗೊಳ್ಳುವುದನ್ನು ತಡೆಯಲು ಸಂಯಮ ಮತ್ತು ರಾಜತಾಂತ್ರಿಕ ಪ್ರಯತ್ನಗಳ ಅಗತ್ಯವಿದೆ. ಪಶ್ಚಿಮ ಏಷ್ಯಾದಲ್ಲಿನ ಯುದ್ಧವು ಭಾರತಕ್ಕೆ ಅನಿರೀಕ್ಷಿತ ಸವಾಲು ಸೃಷ್ಟಿಸಿದೆ. ಯುದ್ಧ ಜಗತ್ತಿಗೆ ಬೆದರಿಸು ಸವಾಲುಗಳನ್ನು ಎಸೆದಿದೆ. ಭಾರತದಲ್ಲಿ ರಾಷ್ಟ್ರೀಯ ಭದ್ರತೆ ಇಂಧನದ ಕೊರತೆಯಾಗಿದೆ. ಯುದ್ಧದಿಂದ ಪರಿಸ್ಥಿತಿ ದಿನೇ ದಿನೇ ಹದಗೆಡುತ್ತಿದೆ ಎಂದು ಹೇಳಿದರು.

ಇನ್ನು ಮುಂದುವರಿದು ಮಾತನಾಡಿದ ಅವರು ಹಾರ್ಮುಜ್‌ ಜಲಸಂಧಿಯನ್ನು ಬಂದ್‌ ಮಾಡಿದ್ದಾರೆ. ಇದು ಸರಿಯಾದ ಕ್ರಮವಲ್ಲ. ಯುದ್ಧದಿಂದ ಭಾರತದಲ್ಲಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಗಲ್ಫ್‌ ಯುದ್ಧದಿಂದ ಭಾರತದ ಮೇಲೆ ಪರಿಣಾಮ ಬೀರಿದೆ. ದೇಶದಲ್ಲಿ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.

 

Tags:
error: Content is protected !!