Mysore
21
light rain

Social Media

ಶುಕ್ರವಾರ, 07 ಆಗಸ್ಟ್ 2026
Light
Dark

ಇರಾನ್‌ನ ಭದ್ರತಾ ಮುಖ್ಯಸ್ಥ ಹತ್ಯೆ : ಇಸ್ರೆಲ್‌

ಜೆರುಸಲೆಮ್ : ಇಸ್ರೇಲ್‌ನ ಸೇನಾ ದಾಳಿಯಲ್ಲಿ ಇರಾನ್‌ನ ಹಿರಿಯ ಭದ್ರತಾ ಅಧಿಕಾರಿ ಅಲಿ ಲಾರಿಜಾನಿ ಹತ್ಯೆಯಾದ್ದಾರೆ ಎಂದು ಇಸ್ರೇಲ್‌ ರಕ್ಷಣಾ ಸಚಿವರು ಘೋಷಿಸಿದ್ದಾರೆ.

ಇರಾನ್‌ನ ರಕ್ಷಣಾ ಮತ್ತು ಭದ್ರತಾ ವ್ಯವಸ್ಥೆಯ ಮೇಲೆ ಗುರಿಯಾಗಿಸಿ ನಡೆಸಿದ ವೈಮಾನಿಕ ದಾಳಿಯಲ್ಲಿ ಅವರು ಬಲಿಯಾಗಿದ್ದಾರೆ ಎಂದು ಇಸ್ರೇಲ್‌ ಹೇಳಿದೆ. ಆದರೆ ಇರಾನ್‌ನಿಂದ ಇನ್ನೂ ಅಧಿಕೃತವಾದ ಯಾವುದೇ ಸುದ್ದಿ ಬಂದಿಲ್ಲ. ಸ್ಥಳೀಯ ಮಾಧ್ಯಮಗಳಲ್ಲಿ ದಾಳಿಯ ವರದಿಗಳು ಮಾತ್ರ ಹರಿದಾಡುತ್ತಿವೆ.

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್‌ನ IRGC (ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್), ರಕ್ಷಣಾ ಸಚಿವರು ಮತ್ತು ಇತರ ಹಲವು ಹಿರಿಯ ಅಧಿಕಾರಿಗಳು ಈಗಾಗಲೇ ಸಾವನ್ನಪ್ಪಿದ್ದಾರೆ ಎಂದು  ಇಸ್ರೇಲ್‌ನಲ್ಲಿ ವರದಿಯಾಗುತ್ತಿದೆ.

Tags:
error: Content is protected !!