ವಾಷಿಂಗ್ಟನ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಐದು ದಿನಗಳ ಕಾಲ ಕದನ ವಿರಾಮ ಘೋಷಣೆ ಮಾಡಿದ್ದಾರೆ.
ಅಮೇರಿಕಾ ಅಧ್ಯಕ್ಷ ಟ್ರಂಪ್ 48 ಗಂಟೆಗಳಲ್ಲಿ ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ ನಿಮ್ಮ ವಿದ್ಯುತ್ ಸ್ಥಾವರ ನಾಶ ಮಾಡುವುದಾಗಿ ಇರಾನಿಗೆ ಬೆದರಿಕೆ ಹಾಕಿದ್ದರು. ಈ ಡೆಡ್‌ಲೈನ್ ಒಳಗಡೆ ಇರಾನ್ ತೆರೆಯದೇ ಇದ್ದರೆ ದೊಡ್ಡ ಪ್ರಮಾಣದ ಯುದ್ಧ ನಡೆಯುವ ಸಾಧ್ಯತೆ ಇತ್ತು.
ಇರಾನ್ ಬೆದರಿಕೆಗೆ ಜಗ್ಗದ ಕಾರಣ ದೊಡ್ಡ ಪ್ರಮಾಣದ ದಾಳಿ ನಡೆಯಬಹುದು ಎಂದು ಊಹಿಸುತ್ತಿದ್ದಾಗಲೇ ಟ್ರಂಪ್ ಐದು ದಿನದ ಕದನ ವಿರಾಮ ಘೋಷಣೆ ಮಾಡಿದ್ದಾರೆ.





