ಟೆಹ್ರಾನ್ : ಪಶ್ಚಿಮ ಏಷ್ಯಾದಲ್ಲಿನ ಯುದ್ಧಕ್ಕೆ ಶೀಘ್ರವೇ ಅಂತ್ಯ ಹಾಡುವುದಾಗಿ ಶನಿವಾರವಷ್ಟೆ ಹೇಳಿದ್ದ ಟ್ರಂಪ್, ಈಗ ಇರಾನ್ ಮೇಲಿನ ದಾಳಿಗಳನ್ನು ಹೆಚ್ಚಿಸುವುದಾಗಿ ಹೇಳಿದ್ದು, ಇರಾನಿನ ಇಂಧನ ಸೌಲಭ್ಯಗಳ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ್ದಾರೆ. ಆದರೆ, ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಇರಾನ್ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗುವುದು ಎಂದು ಎಚ್ಚರಿಕೆ ನೀಡಿದೆ.
ಹೊರ್ಮುಜ್ ಜಲಸಂಧಿಯನ್ನು 48 ಗಂಟೆಗಳ ಒಳಗಾಗಿ ಸಂಚಾರಕ್ಕೆ ಮುಕ್ತಗೊಳಿಸಬೇಕು. ಇಲ್ಲದಿದ್ದರೆ, ಇರಾನ್‌ನ ವಿದ್ಯುತ್ ಸ್ಥಾವರ ಸೇರಿದಂತೆ ಎಲ್ಲ ಸ್ಥಾವರಗಳ ಜತೆಗೆ ಇಂಧನ ಸೌಲಭ್ಯಗಳನ್ನು ನಾಶ ಮಾಡಲಾಗುವುದು ಎಂದು ಟ್ರಂಪ್ ಎಚ್ಚರಿಕೆ ನೀಡಿದ್ದರು.
ಈ ಬೆದರಿಕೆಗೆ ಬಗ್ಗದ ಇರಾನ್, ಜಲಮಾರ್ಗಗಳನ್ನು ಸಂಪೂರ್ಣ ಬಂದ್ ಮಾಡುವುದಾಗಿ ತಿರುಗೇಟು ನೀಡಿದೆ. ಪರಿಣಾಮ ಉದ್ವಿಗ್ನತೆ ಮತ್ತಷ್ಟು ಹೆಚ್ಚುವ ಆತಂಕ ಸೃಷ್ಟಿಯಾಗಿದೆ.
ಇರಾನ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿದರೆ, ಅಮೆರಿಕದ ಷೇರು ಕಂಪನಿಗಳನ್ನು ಸಂಪೂರ್ಣ ನಾಶಮಾಡಲಾಗುವುದು. ಅಮೆರಿಕವು ನೆಲೆಗಳನ್ನು ಹೊಂದಿರುವ ದೇಶಗಳ ಇಂಧನ ಸೌಕರ್ಯಗಳು ಕಾನೂನುಬದ್ಧವಾಗಿಯೂ ನಮ್ಮ ಗುರಿಯಾಗಲಿದೆ ಎಂಬುದಾಗಿ ಇರಾನ್ ರೆವಲ್ಯೂಷನರಿ ಗಾರ್ಡ್ಸ್ ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿದೆ.
ಚಾಮರಾಜನಗರ: ಅಕಾಲಿಕ ಮಳೆಯಿಂದ ಬೆಳೆ ನಷ್ಟವಾಗಿರುವ ಹಿನ್ನೆಲೆಯಲ್ಲಿ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ…
ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ವೇಳೆ ದೇಶದ ಮೇಲಾಗುವ ಪ್ರತಿಕೂಲ ಪರಿಣಾಮಗಳ ಬಗ್ಗೆ ಕೇಂದ್ರ ಸರ್ಕಾರ ಸತತ ನಿಗಾ ವಹಿಸುತ್ತಿದ್ದು,…
ಸಾಲಿಗ್ರಾಮ: ಮೈಸೂರು ಜಿಲ್ಲೆಯ ಸಾಲಿಗ್ರಾಮ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಾರ್ಚ್.25ರಂದು ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರ ಚಿಕಿತ್ಸಾ…
ಹೊಸದಿಲ್ಲಿ: ಭಾರತದ ಯೂರಿಯಾ ಘಟಕಗಳು ಅರ್ಧದಷ್ಟು ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸುತ್ತಿವೆ ಎಂದು ಮೂಲಗಳು ಹೇಳಿವೆ. ಪಶ್ಚಿಮ ಏಷ್ಯಾದಲ್ಲಿನ ಯುದ್ಧವು ಹೊರ್ಮುಜ್…
ಸೌದಿ ಅರೇಬಿಯಾ : ಇರಾನ್-ಇಸ್ರೇಲ್ ಸಂಘರ್ಷದ ನಡುವೆ ಗಲ್ಫ್ ದೇಶಗಳ ಮೇಲಿನ ದಾಳಿಗಳು ಹೆಚ್ಚಾಗುತ್ತಿದ್ದು, ಇರಾನ್‌ನ ಎರಡು ಕ್ಷೀಪಣಿಗಳನ್ನು ಹೊಡೆದುರುಳಿಸಿರುವುದಾಗಿ…
ಬಾಗಲಕೋಟೆ : ಬಾಗಲಕೋಟೆ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ ಅಭ್ಯರ್ಥಿ ಉಮೇಶ್ ಮೇಟಿ ಅವರು ಇಂದು (ಮಾ.23)…